HomeKarnatakaಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ

ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ

ಧಾರವಾಡ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಪ್ರೋಗ್ರಾಮ್ ಕೋ-ಆರ್ಡಿನೇಟರ್ (Programme Coordinator-3), ಮೈಕ್ರೋಬಯೊಲೊಜಿಸ್ಟ್, (Microbiologist-1), ಎಕ್ಸ್-ರೆ ಟೆಕ್ನಿಶಿಯನ್ (X-Ray Technician-3), ಫಾರ್ಮಾಸಿಷ್ಟ (Pharmacist-5, ಸ್ಟಾಫ್ ನರ್ಸ (Staff Nurse-7), ಲ್ಯಾಬ್ ಟೆಕ್ನಿಶಿಯನ್ (Lab Technician-2) ಮತ್ತು ಪ್ರೋಗ್ರಾಮ್ ಮ್ಯಾನೆಜರ್ (Programme Manager-1) ಒಟ್ಟು 22 ಹುದ್ದೆಗಳು ಧಾರವಾಡ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಡಿ  ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.

 ಹೆಚ್ಚಿನ ಮಾಹಿತಿ ಹಾಗೂ ಅರ್ಜಿಗಳನ್ನು ಭರ್ತಿ ಮಾಡಲು https://dharwad.nic.in ಮೂಲಕ ನವೆಂಬರ್ 15, 2026 ರೊಳಗೆ ಅರ್ಜಿ ಸಲ್ಲಿಸಬೇಕು. ಮತ್ತು ನವೆಂಬರ್ 17 ಮತ್ತು 18 ರಂದು ಅಭ್ಯರ್ಥಿಗಳಿಂದ ಮೂಲ ದಾಖಲಾತಿಗಳ ಪರಿಶೀಲನೆ ಪ್ರಕ್ರೀಯೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ, ಕಚೇರಿ, ಧಾರವಾಡ, ಸಂಪರ್ಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧಾರವಾಡ ಜಿಲ್ಲೆಯಲ್ಲಿ ಖಾಲಿಯಾದ ಗ್ರಾಮ ಒನ್ ಕೇಂದ್ರ ಫ್ರಾಂಚೈಸಿಗಾಗಿ ಅರ್ಜಿ ಆಹ್ವಾನ

ಧಾರವಾಡ: ಧಾರವಾಡ ಜಿಲ್ಲೆಯ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಖಾಲಿಯಾಗಿರುವ ಬರುವ ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕುಂದಗೋಳ ತಾಲೂಕಿನ ಸಂಶಿ-1, ಬೆಟದೂರ-1 ಮತ್ತು ಇಂಗಳಗಿ-1 ಗ್ರಾಮ ಪಂಚಾಯತ, ಕಲಘಟಗಿ ತಾಲೂಕಿನ ಭೋಗೆನಾಗರಕೊಪ್ಪ-1 ಮತ್ತು ತಂಬುರ ಗ್ರಾಮ ಪಂಚಾಯತ, ಧಾರವಾಡ ತಾಲೂಕಿನ ಮನಗುಂಡಿ ಗ್ರಾಮ ಪಂಚಾಯತ, ಅಣ್ಣಿಗೇರಿ ಸಾಸ್ವಿಹಳ್ಳಿ 1 ಸೇರಿ ಒಟ್ಟು 07 ಕೇಂದ್ರಗಳಿಗೆ https://sevaone.karnataka.gov.in/services/directApply.do?serviceld=2631 ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯ ಹಾಗೂ ತಹಶೀಲ್ದಾರ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶೀಷ್ಟ ಪಂಗಡದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಗಾಗಿ ಅರ್ಜಿ ಆಹ್ವಾನ

ಧಾರವಾಡ: ಧಾರವಾಡ ತೋಟಗಾರಿಕೆ ಇಲಾಖೆಯಿಂದ 2026-27 ನೇ ಸಾಲಿನ ಧಾರವಾಡ ಜಿಲ್ಲೆಯ ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ತಾಲೂಕಿನಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನೀ ನೀರಾವರಿ) ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಸಹಾಯ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಅವರ ಕಛೇರಿಗೆ ಸಂಪರ್ಕಿಸಲು ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಂಜಾರ ಸಮುದಾಯದ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ: ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮವು ಬಂಜಾರ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಕಲ್ಯಾಣ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಆಸಕ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಸ್ವಯಂ ಉದ್ಯೋಗ ನೇರಸಾಲ-ರೂ.1 ಲಕ್ಷ, ಕುರಿ ಸಾಕಾಣಿಕೆ ಯೋಜನೆ- ರೂ.1 ಲಕ್ಷ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ- ರೂ.2 ಲಕ್ಷ, ಸ್ವಾವಲಂಭಿ ಸಾರಥಿ- ರೂ.4 ಲಕ್ಷ, ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್- ರೂ.4 ಲಕ್ಷ, ಹೈನುಗಾರಿಕೆ- ರೂ.1.25 ಲಕ್ಷ, ಗಂಗಾ ಕಲ್ಯಾಣ ಯೋಜನೆ- ರೂ.3.75 ಲಕ್ಷ, ಭೂ ಒಡೆತನ ಯೋಜನೆ- ರೂ.20 ಲಕ್ಷ, ಮೈಕ್ರೋಕ್ರೆಡಿಟ್ ಯೋಜನೆ- ರೂ.5 ಲಕ್ಷ ಸೌಲಭ್ಯ ನೀಡಲಾಗುವುದು. 

 ಆಸಕ್ತ ಬಂಜಾರ ಸಮುದಾಯದವರು ಸ್ಥಳೀಯ ಗ್ರಾಮ ಒನ್, ಶಿವಮೊಗ್ಗ ಒನ್ ಹಾಗೂ ಕರ್ನಾಟಕ ಒನ್ ಪೋರ್ಟಲ್‌ಗಳಲ್ಲಿ  ನ. 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಅಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular