HomeKarnatakaಆನೆ ಕಾವಾಡಿಗ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಆನೆ ಕಾವಾಡಿಗ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಮಡಿಕೇರಿ :   ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಕೊಡಗು ವೃತ್ತಕ್ಕೆ ಸಂಬಂಧಿಸಿದಂತೆ (10 ಹುದ್ದೆಗಳು+1 ಬ್ಯಾಕ್‍ಲಾಗ್ ಹುದ್ದೆ) ಒಟ್ಟು 11 ಆನೆ ಕಾವಾಡಿಗ ಹುದ್ದೆಗಳಿಗೆ ಆಗಸ್ಟ್, 05 ರಿಂದ ಸೆಪ್ಟೆಂಬರ್, 03 ರವರೆಗೆ ಒಳಗೆ ಅರ್ಜಿ ಆಹ್ವಾನಿಸಲಾಗಿದೆ.ಪೂರ್ಣ ಮಾಹಿತಿಯು ಇಲಾಖಾ ವೆಬ್‍ಸೈಟ್ http://aranya.gov.in ನಲ್ಲಿ ಲಭ್ಯವಿರುತ್ತದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.

ಸೆ.12 ರಂದು ರಾಷ್ಟ್ರೀಯ ಲೋಕ ಅದಾಲತ್

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸೆಪ್ಟೆಂಬರ್, 12 ರಂದು ರಾಜ್ಯದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಅದರಂತೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್, 12 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಲೋಕ ಅದಾಲತ್ ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬೇಕು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಕೋರಿದೆ.

ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ : www.kslsa.kar.nic.in ಸಹಾಯವಾಣಿ ಸಂಖ್ಯೆ 15100 ಅಥವಾ ನಿಮ್ಮ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಶಶಿಧರ ಶೆಟ್ಟಿ ಅವರು ತಿಳಿಸಿದ್ದಾರೆ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular