ಬಳ್ಳಾರಿ : ನಗರದ ಕಂಟೋನ್ಮೆಂಟ್ನ ಶಾಂತಿಧಾಮ ಆವರಣದ ಸರ್ಕಾರಿ ಕಿವುಡು ಮತ್ತು ಮೂಕ ಮಕ್ಕಳ ಪಾಠಶಾಲೆಯಲ್ಲಿ 1ನೇ ತರಗತಿಯಿಂದ 08 ನೇ ತರಗತಿಯವರೆಗೆ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಕಿವುಡು ಮಕ್ಕಳ ಶಾಲೆಯ ಅಧೀಕ್ಷಕ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ.
ಈ ಶಾಲೆಯಲ್ಲಿ ಕಿವುಡು ಮತ್ತು ಮೂಕ ಬಾಲಕರಿಗೆ ಉಚಿತವಾಗಿ ವಿಶೇಷ ಶಿಕ್ಷಣವನ್ನು ನೀಡಲಾಗುತ್ತಿದ್ದು, 6 ವರ್ಷದಿಂದ 14 ವರ್ಷದ ಶ್ರವಣದೋಷ ಮಕ್ಕಳು ದಾಖಲಾತಿ ಪಡೆಯಬಹುದು.
ಶಾಲೆಯಲ್ಲಿ ಮಕ್ಕಳಿಗೆ ಉಚಿತವಾಗಿ ಊಟ ಮತ್ತು ವಸತಿ, ಪಠ್ಯ ಪುಸ್ತಕ, ಸಮವಸ್ತ್ರ ಸೌಲಭ್ಯಗಳೊಂದಿಗೆ ಮಾತಿನ ತರಬೇತಿ, ಶ್ರವಣ ತರಬೇತಿ, ಭಾಷೆ ಕಲಿಕೆ, ಕಂಪ್ಯೂಟರ್ ತರಗತಿ, ಸ್ಮಾರ್ಟ್ ಕ್ಲಾಸ್, ಸೈನ್ಸ್ ಲ್ಯಾಬ್, ವಿಶೇಷ ಶಿಕ್ಷಕರಿಂದ ವಿಷಯ ಭೋದನೆ, ಮಾರ್ಚ್ಫಸ್ಟ್, ಸಾಮೂಹಿಕ ನೃತ್ಯ, ಕ್ರೀಡೆ ಹಾಗೂ ಸಹಪಠ್ಯ ಚಟುವಟಿಕೆಗಳನ್ನು ಕಲಿಸಿಕೊಡಲಾಗುತ್ತದೆ.ಶಾಲೆಗೆ ಶ್ರವಣದೋಷ ಮಕ್ಕಳನ್ನು ದಾಖಲಿಸಲು ಇಚ್ಛಿಸುವ ತಂದೆ, ತಾಯಿ ಮತ್ತು ಪೋಷಕರು ಅಗತ್ಯ ದಾಖಲೆ ಸಲ್ಲಿಸಿ ಪ್ರವೇಶಾತಿ ಪಡೆಯಬಹುದು.
ಬೇಕಾದ ದಾಖಲೆಗಳು:
ಶಾಲೆ ಪ್ರವೇಶ ಅರ್ಜಿ (ಉಚಿತವಾಗಿ ನೀಡಲಾಗುವುದು), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜನ್ಮ ದಿನಾಂಕ ಪ್ರಮಾಣ ಪತ್ರ, ತಂದೆ ಮತ್ತು ತಾಯಿಯ ಆಧಾರ್ ಕಾರ್ಡ್ ಪ್ರತಿ, ವಿದ್ಯಾರ್ಥಿಯ ಆಧಾರ್ ಕಾರ್ಡ್, ಅಂಗವಿಕಲ ಪ್ರಮಾಣ ಪತ್ರ, ಯುಡಿಐಡಿ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಪುಸ್ತಕ ಸೇರಿದಂತೆ ಇತರೆ ದೃಢೀಕೃತ ದಾಖಲಾತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕಿವುಡು ಮಕ್ಕಳ ಪಾಠಶಾಲೆಯ ಅಧೀಕ್ಷಕರ ಕಚೇರಿ ಅಥವಾ ದೂ.08392-297138 ಹಾಗೂ ಮೊ.9008485380, ಮೊ.9902106670 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.