ಡೆಹ್ರಾಡೂನ್‍ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ (ಆರ್‍ಐಎಂಸಿ) ಜನವರಿ 2027ನೇ ಅಧಿವೇಶನಕ್ಕಾಗಿ 8ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗುವ ಅರ್ಹತಾ ಪರೀಕ್ಷೆಗೆ ಜಿಲ್ಲೆಯ ಅರ್ಹ ಬಾಲಕ ಮತ್ತು ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 11 ವರ್ಷದಿಂದ 13 ವರ್ಷ ವಯೋಮಿತಿಯೊಳಗಿರಬೇಕು. ಅಂದರೆ 02-01-2014 ರಿಂದ 01-07-2015 ರ ನಡುವೆ ಜನಿಸಿರಬೇಕು.
ಪ್ರವೇಶ ಪರೀಕ್ಷೆಯು 2026ರ ಜೂನ್ 7ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದ್ದು, ಆಸಕ್ತರು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 15, 2026 ರೊಳಗಾಗಿ ‘ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು – 560025 ವಿಳಾಸಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25589459 ಅಥವಾ ಇಲಾಖೆಯ ಅಧಿಕೃತ ಜಾಲತಾಣ www.rimc.gov.in ಅನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಇದೇ ಫೆ.25 ರಿಂದ 26 ರವರೆಗೆ ಚಿತ್ರದುರ್ಗ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿದೆ.
ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ನೀಡಲಾಗುವುದಿಲ್ಲ. ತರಬೇತಿಗೆ 25 ಜನರ ಗುರಿ ನಿಗಧಿಪಡಿಸಲಾಗಿದ್ದು, ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, ಎರಡು ಪಾಸ್ ಪೋರ್ಟ್ ಸೈಜ್ ಪೊಟೋ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳೊಂದಿಗೆ ತರಬೇತಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9482943111, 9886002248ಗೆ ಸಂಪರ್ಕಿಸಲು ಕೋರಿದೆ. ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ರೈತರು ಮುಂಚಿತವಾಗಿ ವಾಟ್ಸಪ್ ಮೂಲಕ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ನೋಂದಾವಣಿ ಮಾಡಿಕೊಳ್ಳಬೇಕು ಎಂದು ಚಿತ್ರದುರ್ಗ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

