ಬೆಂಗಳೂರು: ವಿವಿಧ ಇಲಾಖೆಗಳ ಒಟ್ಟು 4723 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಿ ಅರ್ಜಿ ಆಹ್ವಾನಿಸಿದೆ.
ಒಟ್ಟು 4723 ಹುದ್ದೆಗಳಲ್ಲಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಕೂಡ ಸೇರಿವೆ. 572 ಗ್ರಾಮ ಆಡಳಿತ ಅಧಿಕಾರಿ, 750 ಸರ್ವೆ ಇಲಾಖೆಯ ಭೂಮಾಪಕರು, 1087 ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು ಹಾಗೂ 2314 ಕೆ.ಎಸ್.ಆರ್.ಪಿ. ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕಲ್ಯಾಣ ಕರ್ನಾಟಕ ವೃಂದಕ್ಕೆ ಸಂಬಂಧಿಸಿದಂತೆ ಎಲ್ಲಾ ಇಲಾಖೆಗಳ ಹುದ್ದೆಗಳಿಗೂ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗಿದೆ. ಕೆಲವು ಹುದ್ದೆಗಳಿಗೆ ಸಂಬಂಧಿಸಿದಂತೆ ಇಂದಿನಿಂದಲೇ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಅರ್ಹರು ಅಧಿಸೂಚನೆ ಓದಿಕೊಂಡು ಅನ್ವಯವಾಗುವ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅಧಿಸೂಚನೆಯಲ್ಲಿಯೇ ಪರೀಕ್ಷಾ ದಿನಾಂಕ ಪ್ರಕಟಿಸಲಾಗಿದ್ದು, ಅದರ ಪ್ರಕಾರ ಸಿದ್ಧತೆ ಕೈಗೊಳ್ಳಬೇಕು. ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ನೋಡಿಕೊಂಡು ನಿಗದಿತ ದಿನದೊಳಗೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಬೇಕು. ಹೆಚ್ಚಿನ ವಿವರಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ಗಮನಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

