ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿಗೆ ಭದ್ರಾವತಿ ತಾಲ್ಲೂಕಿನ ಆನವೇರಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಸಿ.ಎಂ.ಬಿ ಮತ್ತು ಪಿ.ಸಿ.ಎಂ.ಸಿ ಕೋರ್ಸ್ಗಳಲ್ಲಿ ಲಭ್ಯವಿರುವ 80 ಸೀಟುಗಳಿಗೆ ಅರ್ಜಿ ಆಹ್ವಾನಿಸಿದೆ.
ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ/ಹಿಂದುಳಿದ ವರ್ಗದ ವಿದ್ಯಾರ್ಥಿಗಳು 2 ಭಾವಚಿತ್ರ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಎಸ್.ಟಿ.ಎಸ್. ನಂಬರ್, ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಕಲು ಪ್ರತಿ ಹಾಗೂ ಪೋಷಕರ ಅಥವಾ ಹಿಂದಿನ ಶಾಲೆಯ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆ, ವಿಶೇಷ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಿ ಸೆ. 12 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ.9535636963 ಗೆ ಸಂಪರ್ಕಿಸುವುದು.
You Might Also Like
TAGGED:ಪಿ.ಯು.ಸಿ