ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ (DA-JGUA) ಮತ್ತು ಪ್ರಧಾನಮಂತ್ರಿ ಜನಜಾತೀಯ ಉನ್ನತ ಗ್ರಾಮ ಅಭಿಯಾನ (PM-JUGA)ದ ಅಧೀನದಲ್ಲಿ, ಪ್ರವಾಸೋದ್ಯಮ ಸಚಿವಾಲಯದ ಸ್ವದೇಶ ದರ್ಶನ ಯೋಜನೆಯ ಉಪಯೋಜನೆಯಾಗಿ ಆದಿವಾಸಿ ಪ್ರದೇಶಗಳಲ್ಲಿ ಹೋಂಸ್ಟೇ ಅಭಿವೃದ್ಧಿಗೆ ಸಹಾಯಧನ ನೀಡಲಾಗುತ್ತಿದ್ದು, ಈ ಯೋಜನೆಯ ಉದ್ದೇಶ, ಪರಿಶಿಷ್ಟ ಪಂಗಡದ ಬುಡಕಟ್ಟು/ಅದಿವಾಸಿ ಸಮುದಾಯವಿರುವ ಗ್ರಾಮಗಳಲ್ಲಿ ಅತಿಥ್ಯಾಧಾರಿತ ಪ್ರವಾಸೋದ್ಯಮವನ್ನು ಉತ್ತೇಜಿಸುವುದು, ಸ್ಥಳೀಯ ಜನರಿಗೆ ಖಾಯಂ ಸ್ವಯಂ ಉದ್ಯೋಗ ಅವಕಾಶಗಳನ್ನು ಒದಗಿಸುವುದು ಮತ್ತು ಬುಡಕಟ್ಟು/ ಆದಿವಾಸಿ ಸಮುದಾಯದ ಸಂಸ್ಕøತಿ, ಪರಂಪರೆ ಮತ್ತು ನೈಸರ್ಗಿಕ ಸಂಪತ್ತನ್ನು ಪ್ರವಾಸಿಗರಿಗೆ ಪರಿಚಯಿಸುವುದಾಗಿದೆ.
ಈ ಯೋಜನೆಯಡಿ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮವನ್ನು ಆಯ್ಕೆ ಮಾಡಲಾಗಿರುತ್ತದೆ. ಆಯ್ಕೆ ಮಾಡಿರುವ ಈ ಗ್ರಾಮದಲ್ಲಿ ಹೋಂಸ್ಟೇಗಳನ್ನು ಅಭಿವೃದ್ಧಿಪಡಿಸಲು ಸ್ಥಳೀಯ ಪರಿಶಿಷ್ಟ ಪಂಗಡದ ಬುಡಕಟ್ಟು/ ಆದಿವಾಸಿ ಸಮುದಾಯಗಳಿಗೆ ಪ್ರತಿ ಹೋಂ-ಸ್ಟೇ ನಿರ್ಮಾಣಕ್ಕೆ 5 ಲಕ್ಷದವರೆಗೆ ಸಹಾಯಧನ, ನವೀಕರಣಕ್ಕೆ 3 ಲಕ್ಷದವರೆಗೆ ಹಣಕಾಸು ಸಹಾಯಧನ ನೀಡಲಾಗುವುದು.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮಗಳ ಪರಿಶಿಷ್ಟ ಪಂಗಡ ಬುಡಕಟ್ಟು/ಆದಿವಾಸಿ ಸಮುದಾಯವರು ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ವಾಸಸ್ಥಳ ಪ್ರಮಾಣ ಪತ್ರ, ಹೋಂ-ಸ್ಟೇ ನಿರ್ಮಿಸುವ ಹಾಗೂ ನವೀಕರಿಸುವ ಜಾಗದ ಹಕ್ಕು ಪತ್ರ/ಖಾತೆ ಹಾಗೂ ಇತರೆ ಜಮೀನಿನ ಮಾಲೀಕತ್ವದ ದಾಖಲಾತಿಗಳು, ಬ್ಯಾಂಕ್ ಖಾತೆ ವಿವರ, ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಪೋಲೀಸ್ ಠಾಣೆಯಿಂದ ನಿರಾಕ್ಷೇಪಣಾ ಪತ್ರ ಹಾಗೂ ಹೋಂ-ಸ್ಟೇ ಪೋಟೋ ಈ ದಾಖಲಾತಿಗಳೊಂದಿಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ-571201 ನ್ನು ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗೆ ದೂ.ಸಂ.08272-.200519 ಸಂಪರ್ಕಿಸಲು ಕೋರಿದೆ.
ಎಲ್ಲಾ ದಾಖಲಾತಿಗಳೊಂದಿಗೆ ಸ್ವಯಂ ಧೃಢೀಕರಿಸಿ ದ್ವಿಪ್ರತಿಯಲ್ಲಿ ಈ ಕಚೇರಿಗೆ ಆಗಸ್ಟ್, 11 ರೊಳಗೆ ಮುಚ್ಚಿದ ಲಕೋಟೆಯಲ್ಲಿ ಈ ಕಚೇರಿಗೆ ಸಲ್ಲಿಸುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.