HomeKarnataka'ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ' ಸಹಾಯಧನಕ್ಕೆ ಅರ್ಜಿ ಆಹ್ವಾನ

‘ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ’ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆ(ನಗರ) 2.0 ಯೋಜನೆಯಡಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರುಗೋಡು ಪುರಸಭೆ ಮುಖ್ಯಾಧಿಕಾರಿ ಕೆ.ದುರುಗಣ್ಣ ಅವರು ತಿಳಿಸಿದ್ದಾರೆ.

2023-24ನೇ ಸಾಲಿನಲ್ಲಿ ಕುರುಗೋಡು ಪುರಸಭೆಗೆ ಒಟ್ಟು 66 ವೈಯಕ್ತಿಕ ಶೌಚಾಲಯ ಗುರಿ ನಿಗಧಿಪಡಿಸಿದ್ದು, ಈಗಾಗಲೇ ಪ್ರಕಟಣೆ ಹೊರಡಿಸಲಾಗಿದ್ದು, ಇಲ್ಲಿಯವರೆಗೆ ಒಟ್ಟು 27 ಅರ್ಜಿಗಳು ಸ್ವೀಕೃತಗೊಂಡಿವೆ. ಇನ್ನುಳಿದ 39 ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ವೈಯಕ್ತಿಕ ಶೌಚಾಲಯಗಳನ್ನು ಹೊಂದದೇ ಇರುವ ಮತ್ತು ಈ ಹಿಂದೆ ವೈಯಕ್ತಿಕ ಶೌಚಾಲಯಕ್ಕೆ ಪುರಸಭೆಯಿಂದ ಯಾವುದೇ ಅನುದಾನ ಪಡೆಯದೇ ಇರುವ ಫಲಾನುಭವಿಗಳು ತಮ್ಮ ಸ್ವಂತ ಜಾಗದಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನ ಪಡೆಯಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿಗಳನ್ನು ಫೆ.17ರೊಳಗಾಗಿ ಕಚೇರಿ ಸಮಯದಲ್ಲಿ ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅವಧಿ ಮೀರಿ ಬಂದಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಾರ್ಯಾಲಯ ಕಚೇರಿ ಅಥವಾ ದೂ.08393-263166ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular