ಮಡಿಕೇರಿ : ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2026 ರ ಮೇ, 02 ರಿಂದ 2027 ರ ಫೆಬ್ರವರಿ, 28 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಏಪ್ರಿಲ್, 15 ಕೊನೆಯ ದಿನವಾಗಿದೆ. ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯ ವಲಯ, ಮಡಿಕೇರಿ ಕಚೇರಿಯಿಂದ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ಕಚೇರಿಯನ್ನು ಬೆಳಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದು ಅಥವಾ ಅಂತರ್ಜಾಲ https://horticulturedir.karnataka.gov.in ಇಲ್ಲಿ ಅರ್ಜಿಯನ್ನು ಪಡೆಯಬಹುದು. ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ/ತಾಯಿ/ ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ಜಾತಿ ಪ್ರಮಾಣ ಪತ್ರ, ಪೋಟೋ, ತಂದೆ/ತಾಯಿಯವರ ಒಪ್ಪಿಗೆ ಪತ್ರ ಇತ್ಯಾದಿ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾಜ್ಯ ವಲಯ), ಮಡಿಕೇರಿಗೆ ಖುದ್ದು ಸಲ್ಲಿಸಬೇಕು ಎಂದು ಮಡಿಕೇರಿ ರಾಜ್ಯವಲಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

