ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಮಾಜಿ ದೇವದಾಸಿ ಮಹಿಳೆಯರ ನಿವೇಶನ ಹೊಂದಿರುವ ವಸತಿ ರಹಿತರಿಂದ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಿಂದ ಪಡೆದು ಭರ್ತಿ ಮಾಡಿ, ಪೂರಕ ದಾಖಲೆಗಳೊಂದಿಗೆ ಅರ್ಜಿಗಳನ್ನು ಇದೇ ಕಚೇರಿಗೆ ಸೆ.25 ವರೆಗೆ ಸಲ್ಲಿಸಬಹುದಾಗಿದೆ.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಆರ್.ಡಿ.ನಂಬರ್ ಹೊಂದಿರಬೇಕು), ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ಭಾವಚಿತ್ರ-4, ನಿವೇಶನ ಖಾತಾ ಉತ್ತಾರ, ಆಧಾರ್ ಕಾರ್ಡ್ ಪ್ರತಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ನಂಬರ್, ಗ್ರಾಮ ಪಂಚಾಯತಿ ವತಿಯಿಂದ ವಸತಿ ಸೌಲಭ್ಯ ಪಡೆದಿರುವುದಿಲ್ಲವೆೆಂಬ ದೃಢೀಕರಣ ಪತ್ರ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಎಸ್‌ಪಿ ವೃತ್ತದ ಬಳಿಯ ದೇವಿನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.