ರಾಜ್ಯದ SC/ST ವಿದ್ಯಾರ್ಥಿಗಳಿಗೆ ಗುಡ್  ನ್ಯೂಸ್ : ಪ್ರೋತ್ಸಾಹಧನಕ್ಕಾಗಿ ಆನ್’ಲೈನ್ ಅರ್ಜಿ ಆಹ್ವಾನ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳುಗಳಿಗೆ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿವೇತನ ಮಾಹಿತಿಗಾಗಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ https://ssp.postmatric.karnataka.gov.in, ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕಾಗಿ

https://swdservices.karnataka.gov.in ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಪ್ರೋತ್ಸಾಹಧನ್ಕಕಾಗಿ https://twd.karnataka.gov.in/TWPostPrizemoney ಇಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು ಕಛೇರಿ , ಎಸ್ .ಕರಿಯಪ್ಪ ರಸ್ತೆ, ಕನಕಪುರ ಮುಖ್ಯ ರಸ್ತೆ, ಬನಶಂಕರಿ, ಬೆಂಗಳೂರು ಅಥವಾ ದೂರವಾಣಿ ಸಂ:080-26711096 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read