ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಸಿಖ್, ಪಾರ್ಸಿ ಹಾಗೂ ಜೈನ್) ವಿದ್ಯಾರ್ಥಿಗಳಿಗೆ KEA ಮೂಲಕ ವೃತ್ತಿಪರ ಹಾಗೂ ತಾಂತ್ರಿಕ ಕೋರ್ಸುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ರೂ.5.00 ಲಕ್ಷಗಳ ಮಿತಿಗೊಳಪಟ್ಟ ಶುಲ್ಕ ಮರುಪಾವತಿ ಮಾಡಲು ಹಾಗೂ ಮೆಟ್ರಿಕ್ ನಂತರದ ಪಿಯುಸಿ, ಪದವಿ, ಸ್ನಾತಕೋತ್ತರ, ವೃತ್ತಿಪರ, ಎಂ.ಫಿಲ್. ಹಾಗೂ ಪಿಹೆಚ್.ಡಿ. ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾಂತರ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ.
ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು SSP ಪೋರ್ಟಲ್ ನಲ್ಲಿ https://ssp.postmatric.karnataka.gov.in ವೆಬ್ ಸೈಟ್ ನ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30, 2026 ರಂದು ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ, ಬೆಂಗಳೂರು ನಗರ -560001 ಅಥವಾ ದೂರವಾಣಿ: 080-22866718 ಅನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಅಹ್ವಾನ
*ಬೆಂಗಳೂರು ನಗರ ಜಿಲ್ಲೆ ಜುಲೈ 07 (ಕರ್ನಾಟಕ ವಾರ್ತೆ ):* ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ 2026-27 ನಲ್ಲಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಬೆಂಗಳೂರು ಪೂರ್ವ ತಾಲ್ಲೂಕು ವ್ಯಾಪ್ತಿಯ ಶಾಲಾ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು https://ssp.postmatric.karnataka.gov.in ಮೂಲಕ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿವೇತನ (SSP) ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್ -1) ರವರ ಕಛೇರಿ,ಸಮಾಜ ಕಲ್ಯಾಣ ಇಲಾಖೆ ಟಿ.ಸಿ.ಪಾಳ್ಯ ಮುಖ್ಯರಸ್ತೆ, ಬೆಂಗಳೂರು ಪೂರ್ವ ತಾಲ್ಲೂಕು -560049, ದೂರವಾಣಿ ಸಂಖ್ಯೆ 080-29535045 ಅಥವಾ ಇ-ಮೇಲ್ [email protected] ಅನ್ನು ಸಂಪರ್ಕಿಸಬಹುದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್ -1) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

