ಬೆಂಗಳೂರು: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದನ್ವಯ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹ ಸಹಕಾರ ಸಂಘ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಪ್ರಸ್ತಾಪಿಸಿರುವ ಗುಳಕಮಲೆ ಪ್ರದೇಶದಲ್ಲಿ ಒಟ್ಟು ಪಡಿತರ ಚೀಟಿ- 525 ಇಲ್ಲಿ ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿಗಳನ್ನು ನಿಯೋಜಿಸಲಾಗಿದೆ.
ಅರ್ಜಿ ಸಲ್ಲಿಸಲು ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿದ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಕಚೇರಿಗೆ ಆಗಸ್ಟ್ 30 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22215594, ಇಮೇಲ್ [email protected] ಅನ್ನು ಸಂಪರ್ಕಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಕ್ಷಮ ಪ್ರಾಧಿಕಾರಿ ಹಾಗೂ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದನ್ವಯ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹ ಸಹಕಾರ ಸಂಘ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಂಗಳೂರು ಪೂರ್ವ ತಾಲ್ಲೂಕು ವ್ಯಾಪ್ತಿಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಪ್ರಸ್ತಾಪಿಸಿರುವ ನಿಂಬೇಕಾಯಿಪುರ ಪ್ರದೇಶದಲ್ಲಿ ಒಟ್ಟು ಪಡಿತರ ಚೀಟಿ- 643 ಇಲ್ಲಿ ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿಗಳನ್ನು ನಿಯೋಜಿಸಲಾಗಿದೆ.