ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿಗೆ ರಾಷ್ಟ್ರೀಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎನ್.ಎಸ್.ಪಿ ಪೋರ್ಟಲ್) ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲೆಯ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ತಾವುಗಳು ವ್ಯಾಸಂಗ ಮಾಡುತ್ತಿರುವ ಶಾಲಾ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳ ಮುಖಾಂತರ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ ವಿಧ್ಯಾರ್ಥಿವೇತನಕ್ಕೆ ಅರ್ಜಿಯನ್ನು ವೆಬ್‍ಸೈಟ್ https://scholarships.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ, ಅರ್ಜಿಯ ಒಂದು ಪ್ರತಿಯನ್ನು ಆಯಾ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದೇಶ ಪುನರ್ವಸತಿ ಕಾರ್ಯಕರ್ತರು ಅಥವಾ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ. ಪ್ರಿಮೆಟ್ರಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಪೋಸ್ಟ್ ಮೆಟ್ರಿಕ್ ಹಾಗೂ ಟಾಪ್ ಕ್ಲಾಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.

ಮಾಹಿತಿಗಾಗಿ ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿದ್ದೊದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಒನಕೆ ಓಬವ್ವ ಸ್ಟೇಡಿಯಂ ರಸ್ತೆ, ಚಿತ್ರದುರ್ಗ ದೂರವಾಣಿ ಸಂಖ್ಯೆ 08194-235284 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read