HomeKarnatakaಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಜಮೀನು ಖರೀದಿಸಲು ಅರ್ಜಿ ಆಹ್ವಾನ

ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಜಮೀನು ಖರೀದಿಸಲು ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲಾ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಇದರ ಅಧೀನದಲ್ಲಿ ಬರುವ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮಗಳಿಂದ ಕೇಂದ್ರ ಕಚೇರಿ ವಾರ್ಷಿಕ ಗುರಿಗಳ ಪ್ರಕಾರ ಜಿಲ್ಲೆಯಾದ್ಯಾಂತ ಭೂ ಮಾಲೀಕರಿಂದ ಜಮೀನಗಳನ್ನು ಖರೀದಿಸಲು ಅರ್ಹ ಮಹಿಳಾ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಏ.30 ರಂದು ಕೊನೆಯ ದಿನವಾಗಿದೆ.ಈ ಹಿಂದೆ ಜಿಲ್ಲಾ ಕಚೇರಿಯಲ್ಲಿ ಇರುವ ಪ್ರಸ್ತಾವನೆಗಳನ್ನು ರದ್ದು ಪಡಿಸಲು ಹಾಗೂ ಹೊಸ ಪ್ರಸ್ತಾವನೆಗಳನ್ನು ಪಡೆಯಲು ಜಿಲ್ಲಾಧಿಕಾರಿಯವರಿಂದ ಅನುಮೋದನೆ ಪಡೆಯಲಾಗಿದೆ.

ಭೂ ಮಾಲೀಕರ ಪ್ರಸ್ತಾವನೆಗಳ ನಿಯಮ: ಭೂ ಮಾಲೀಕರು ಖುದ್ದಾಗಿ ನಮೂನೆ-1 ರ ಒಪ್ಪಿಗೆ ಪತ್ರವನ್ನು ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಅಗತ್ಯ ಎಲ್ಲಾ ದಾಖಲಾತಿಗಳನ್ನು ಸಲ್ಲಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫಲಾನುಭವಿಗಳ ನಿಯಮ: ಭೂ ರಹಿತ ಕೃಷಿ ಕಾರ್ಮಿಕ ಮಹಿಳಾ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಜಮೀನು ಇಲ್ಲದೇ ಇರುವ ಬಗ್ಗೆ ದೃಢೀಕರಣ ಪತ್ರ ಸಲ್ಲಿಸಬೇಕು. ಜಾತಿ ಪ್ರಮಾಣ ಪತ್ರ, ಆದಾಯ ಪತ್ರ, ರೇಷನ್ ಕಾರ್ಡ್, ಆಧಾರ್ ಕಾಡ್, ಗುರುತಿನ ಚೀಟಿ ಹಾಗೂ ಇತರೆ ದಾಖಲೆಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ಮೊ.8050854106 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular