HomeKarnatakaವಿಕಲಚೇತನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ವಿಕಲಚೇತನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎಸ್‍ಎಸ್‍ಪಿ ಫೋರ್ಟಲ್) 2026–27ನೇ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

2026ರ ಜೂನ್ 10 ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅರ್ಹ ವಿಕಲಚೇತನ ವಿದ್ಯಾರ್ಥಿಗಳು ತಾವು ಓದುತ್ತಿರುವ ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖಾಂತರ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ವೆಬ್‍ಸೈಟ್‍ಗಳಾದ https://ssp.postmatric.karnataka.gov.in/ ಅಥವಾ https://ssp.postmatric.karnataka.gov.in/post_sa_2627/login ಮೂಲಕ ಲಾಗಿನ್ ಆಗಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಅದರ ಒಂದು ಪ್ರತಿಯನ್ನು ಆಯಾ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಅಥವಾ ಗ್ರಾಮ ಪಂಚಾಯಿತಿಯ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿ ಹಾಗೂ ನೆರವಿಗಾಗಿ ಚಿತ್ರದುರ್ಗ-9880821934), ಚಳ್ಳಕೆರೆ-9611266930, ಹಿರಿಯೂರು-9902888901, 9902898901, ಹೊಳಲ್ಕೆರೆ-9740030227, ಹೊಸದುರ್ಗ -9741829990 ಹಾಗೂ ಮೊಳಕಾಲ್ಮೂರು -9742725576 ತಾಲ್ಲೂಕಿನ ಫುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದಾಗಿದೆ. ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಒನಕೆ ಓಬವ್ವ ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ಇಲ್ಲಿಗೆ ಭೇಟಿ ನೀಡಬಹುದು. ಕಚೇರಿ ದೂರವಾಣಿ ಸಂಖ್ಯೆ: 01894–235284 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular