ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಗಳಲ್ಲಿ ದೂರ ಶಿಕ್ಷಣದ ಮೂಲಕ ಪದವೀಧರ, ಸ್ನಾತಕೋತ್ತರ ಶಿಕ್ಷಣ ಪಡೆಯುವ ಜಿಲ್ಲೆಯ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಹಾಗೂ ಶೈಕ್ಷಣಿಕವಾಗಿ ಪ್ರೋತ್ಸಾಹಿಸಲಾಗುತ್ತಿದ್ದು, ದೂರ ಶಿಕ್ಷಣದ ಮೂಲಕ ಪದವೀಧರ, ಸ್ನಾತಕೋತ್ತರ ಹಾಗೂ ಪಿಹೆಚ್.ಡಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಕೋಟೆ ಪ್ರದೇಶದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ-ಮೊ.9480843023, ಕೌಲ್ ಬಜಾರ್ 1ನೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ-ಮೊ.9480843073, ಸಂಡೂರಿನ ಸಿಡಿಪಿಒ ಕಚೇರಿ ಹತ್ತಿರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ-ಮೊ.9480843079 ಮತ್ತು ಸಿರುಗುಪ್ಪದ ವಿನಾಯಕ ನಗರದ ಈಡಿಗರ ಶೀನಪ್ಪ ಲೇಔಟ್ ನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ-ಮೊ.9480843078 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read