HomeLatest NewsSCHOLARSHIP : ವಿಕಲಚೇತನ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

SCHOLARSHIP : ವಿಕಲಚೇತನ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

2025-26ನೇ ಸಾಲಿನಲ್ಲಿ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ 1ನೇ ತರಗತಿಯಿಂದ 10ನೇ ತರಗತಿವರೆಗೆ (ಪ್ರೀ-ಮೆಟ್ರಿಕ್) ಹಾಗೂ ಪೋಸ್ಟ ಮ್ಯಾಟ್ರಿಕ್ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿಕಲಚೇತನ ವಿದ್ಯಾರ್ಥಿಗಳು ಸ್ಟೇಟ್ ಸ್ಕಾಲರ್‍ಶಿಫ್ ಪೋರ್ಟಲ್‍ನಲ್ಲಿ SSP Homepage URL: https://ssp.postmatric.karnataka.gov.in/homepage.aspx, Prematric Application Submission URL: https://ssp.postmatric.karnataka.gov.in/ssppre/, Postmatric Application Submission URL:https://ssp.postmatric.karnataka.gov.in/post_sa/signin.aspx ನಲ್ಲಿ ವಿದ್ಯಾರ್ಥಿವೇತನದ ಅರ್ಜಿಯನ್ನು ಸಲ್ಲಿಸಿ, ಹಾರ್ಡ ಪ್ರತಿಗಳನ್ನು ಸಂಬಂಧಪಟ್ಟ ತಾಲ್ಲೂಕಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತ (ಎಂ.ಆರ್.ಡಬ್ಲ್ಯೂ)ರವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ)ಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ:0836-2744474 ಸಂಪರ್ಕಿಸಬಹುದು ಮತ್ತು ಈ ಸೌಲಭ್ಯವನ್ನು ವಿಕಲಚೇತನ ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular