HomeKarnatakaಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಜೆ.ಸಿ.ಓ ಶ್ರೇಣಿವರೆಗಿನ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2026-27ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ಪದವಿ/ಡಿಪ್ಲೋಮಾ ವರೆಗೆ ವ್ಯಾಸಂಗ ಮಾಡುತ್ತಿರುವವರು ದಿನಾಂಕ 31-10-2026 ರೊಳಗಾಗಿ ಮತ್ತು ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ದಿನಾಂಕ 30-11-2026 ರೊಳಗಾಗಿ ಶಿಷ್ಯವೇತನಕ್ಕಾಗಿ ಶುಲ್ಕ ರಹಿತ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಿಂದ ಪಡೆದು ಯಾವ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವರೋ ಆ ಜಿಲ್ಲೆಗೆ ಸಂಬಂಧಿತ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಛೇರಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಾದ ಸಿ.ಎ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2026-27ನೇ ಸಾಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷಗೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000 ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ. 1,00,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.

ಸಾಹಸ ಪ್ರಕರಣವು ದಿ: 01/08/2025 ರಿಂದ 31/07/2026 ರೊಳಗೆ ನಡೆದಿರಬೇಕು. ಧೈರ್ಯ ಸಾಹಸ ಪ್ರದರ್ಶಿಸಿದ ಕುರಿತು ಜಿಲ್ಲಾ ಮಟ್ಟದಲ್ಲಿ ಗುರುತಿಸಿರಬೇಕು ಮತ್ತು ಈ ಬಗ್ಗೆ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿರಬೇಕು. ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಶಾಲಾ ಶಿಕ್ಷಕರು ಈ ಸಾಧನೆಯನ್ನು ಗುರುತಿಸಿ ಜಿಲ್ಲಾ ಮಟ್ಟಕ್ಕೆ ತಿಳಿಸಬಹುದು. ಜನ್ಮ ದಿನಾಂಕದ ಬಗ್ಗೆ ನಗರಗಳಲ್ಲಿ ಮಹಾನಗರ ಪಾಲಿಕೆ, ಗ್ರಾಮ ಪಂಚಾಯತ್ ಮಟ್ಟದಲ್ಲಿ ತಾಲೂಕು ತಹಶೀಲ್ದಾರ್‌ರವರಿಂದ ದೃಢೀಕರಣ ಪಡೆದಿರಬೇಕು. ಶೌರ್ಯ ಸಾಧನೆ ತೋರಿದ ಬಗ್ಗೆ ಆರಕ್ಷಕ ಇಲಾಖೆಯ ಪ್ರಾಥಮಿಕ ತನಿಖಾ ವರದಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ವ್ಯಕ್ತಿ/ಸಂಸ್ಥೆಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ಇಲ್ಲದಿರುವ ಬಗ್ಗೆ ಪೊಲೀಸ್ ಇಲಾಖೆಯಿಂದ ಪರಿಶೀಲನಾ ವರದಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.

ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರಿಂದ ಪಡೆದುಕೊಂಡು, ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ದಿ: 20/08/2026 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-295514 ನ್ನು ಸಂಪರ್ಕಿಸಬಹುದೆಂದುಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು, ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular