HomeLatest NewsBIG NEWS : ರಾಜ್ಯದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

BIG NEWS : ರಾಜ್ಯದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಅಲೆಮಾರಿ, ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.

ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in ವೆಬ್ಸೈಟ್ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ 8050770005, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ದೂರವಾಣಿ ಸಂಖ್ಯೆ 1902 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular