HomeKarnatakaಕ್ರೀಡಾ ರತ್ನ, ಏಕಲವ್ಯ, ಕ್ರೀಡಾ ಪೋಷಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಕ್ರೀಡಾ ರತ್ನ, ಏಕಲವ್ಯ, ಕ್ರೀಡಾ ಪೋಷಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಪಟುಗಳಿಗೆ ವಿವಿಧ ಪ್ರಶಸ್ತಿ ಹಾಗೂ ನಗದು ಬಹುಮಾನಗಳನ್ನು ನೀಡಲು ಅರ್ಜಿ ಆಹ್ವಾನಿಸಿದೆ.

ಕ್ರೀಡಾ ಕ್ಷೇತ್ರದಲ್ಲಿ ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ, ಏಕಲವ್ಯ ಪ್ರಶಸ್ತಿ, ರಾಷ್ಟ್ರ ಮತ್ತು ಅಂತರಾಷ್ಟ್ರ ಮಟ್ಟದಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ನಗದು ಬಹುಮಾನ ಹಾಗೂ ಕ್ರೀಡೆಗೆ ಪ್ರೋತ್ಸಾಹಿಸುವ ಪೋಷಕ/ಸಂಸ್ಥೆಗಳಿಗೆ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಆಸಕ್ತ ಅರ್ಹ ಕ್ರೀಡಾಪಟುಗಳು ನಿಗಧಿತ ನಮೂನೆ ಅರ್ಜಿಯನ್ನು ನಗರದ ನೆಹರೂ ಕ್ರೀಡಾಂಗಣದಲ್ಲಿರುವ ಇಲಾಖಾ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ನವೆಂಬರ್ 20 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-223328ನ್ನು ಸಂಪರ್ಕಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular