HomeKarnatakaಕೃಷಿ ಇಲಾಖೆ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಗಳ ಹುದ್ದೆಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಗಳ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2026-26 ನೇ ಸಾಲಿಗೆ ಆತ್ಮ ಯೋಜನೆಯಡಿ ಖಾಲಿಯಿರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹಾಗೂ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಸಿಬ್ಬಂದಿ ಸೇವೆ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಾನ 45 ವರ್ಷ ಮೀರಿರಬಾರದು. ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ 10 ಖಾಲಿ ಹುದ್ದೆಗಳಿದ್ದು ಜಿಲ್ಲೆಯ ಎಲ್ಲಾ ತಾಲೂಕುಗಳ ಕಸಬಾ ರೈತ ಸಂಪರ್ಕ ಕೇಂದ್ರಗಳಿಗೆ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಳ್ಳಿಕೆರೆ ಕೇಂದ್ರದಲ್ಲಿ ಹುದ್ದೆಗಳು ಖಾಲಿ ಇವೆ. ವಿದ್ಯಾರ್ಹತೆ

ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ ಹೊಂದಿರಬೇಕು ಹಾಗೂ ಒಂದು ವರ್ಷದ ಅನುಭವವಿರಬೇಕು. ಹೊಸನಗರ ತಾಲೂಕಿನಲ್ಲಿ ಖಾಲಿಯಿರುವ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ 5 ವರ್ಷ ಸಹಾಯಕ ತಾಂತ್ರಿಕ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ ಅನುಭವವಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ಕೃಷಿ ನಿರ್ದೇಶಕರ ಕಚೇರಿ, ಹಳೇ ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜು. 24 ರೊಳಗಾಗಿ ಸಲ್ಲಿಸಬೇಕೆಂದಯ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular