ವಿಕಲಚೇತನರ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರವು 2025-26ನೇ ಸಾಲಿಗೆ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ/ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿಯಿಂದ ಪಡೆದು, ಅರ್ಜಿದಾರರ/ವ್ಯಕ್ತಿಗಳ/ಸಮಸ್ಥೆಗಳ ಸ್ವವಿವರ ಹಾಗೂ ಸಾಧನೆಗಳ ಸಾರಾಂಶ, ಜಿಲ್ಲೆ, ರಾಜ್ಯ, ರಾಷ್ಟç ಮತ್ತು ಅಂತರಾಷ್ಟಿçÃಯ ಮಟ್ಟದಲ್ಲಿ ಮಾಡಿದ ಸಾಧನೆಗಳ ಪ್ರಮಾಣ ಪತ್ರ, ಹಾಗೂ ಇದುವರೆಗೂ ರಾಜ್ಯ ಪ್ರಶಸ್ತಿಯನ್ನು ಪಡೆಯದೇ ಇರುವ ಬಗ್ಗೆ ದೃಢೀಕರಣದ ಪೂರಕ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅ. 15 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಬಿಎಸ್ಎನ್ಎಲ್ ಕಚೇರಿ ಹತ್ತಿರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗೆ ಕಚೇರಿಯನ್ನು ಖುದ್ದಾಗಿ ದೂ.ಸಂ.: 08182-251676 ಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.