HomeLatest Newsಮತ್ಸ್ಯಾಶ್ರಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಮತ್ಸ್ಯಾಶ್ರಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ, : ಮೀನುಗಾರಿಕೆ ಇಲಾಖೆಯು 2024-25ನೇ ಸಾಲಿನ ಮತ್ಸ್ಯಾಶ್ರಯ ಯೋಜನೆಯಡಿ ವಸತಿ ರಹಿತ ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಶಿವಮೊಗ್ಗ ನಗರ/ಗ್ರಾಮಾಂತರ ಮತ್ತು ಎಲ್ಲಾ 7 ತಾಲೂಕುಗಳಿಗೆ ತಲಾ 25 ಮನೆಗಳ (19-ಸಾಮಾನ್ಯ, 4 ಪ.ಜಾ, 02 ಪ.ಪಂ) ಗುರಿ ನಿಗದಿಪಡಿಸಲಾಗಿದೆ. ಮೀನುಗಾರಿಕೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಾಗೂ ಮೀನುಗಾರಿಕೆ ಸಹಕಾರ ಸಂಘಗಳಲ್ಲಿ ನೋಂದಾಯಿಸಿಕೊಂಡಿರುವ ಮೀನುಗಾರರು ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಶಿವಮೊಗ್ಗ ಜಿಲ್ಲಾ ಮೀನುಗಾರಿಕೆ ಇಲಾಖೆ ಅಥವಾ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೆಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜೂನ್ 30ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಮೀನುಗಾರಿಕೆ ಇಲಾಖೆ ಅಥವಾ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೆಶಕರ ಕಚೇರಿಗಳನ್ನು ಸಂಪರ್ಕಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular