2025-26ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ರಾಜ್ಯವಲಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50 ರಷ್ಟು ಅಥವಾ ಗರಿಷ್ಟ ರೂ.3.00 ಲಕ್ಷ ಆರ್ಥಿಕ ನೆರವು ಎಂಬ ಯೋಜನೆಯನ್ನು ಇಲಾಖಾ ಷರತ್ತು ಮತ್ತು ನಿಬಂಧನೆಗಳಿಗೊಳಪಟ್ಟು ಅನುಷ್ಟಾನಗೊಳಿಸಲಾಗುತ್ತಿದೆ.
ಸದರಿ ಯೋಜನೆಯಡಿ ಶಿವಮೊಗ್ಗ ಜಿಲ್ಲೆಗೆ ಪರಿಶಿಷ್ಟ 03-02 ಮತ್ತು ಪರಿಶಿಷ್ಟ ಪಂಗಡ-01 ಮೀನು ಮಾರಾಟಗಾರರಿಗೆ ಗುರಿಯನ್ನು ನಿಗದಿಪಡಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಮೀನು ಮಾರಾಟಗಾರರು ದಿನಾಂಕ : 20-09-2025ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರುಗಳನ್ನು ಸಂಪರ್ಕಿಸಿ ಸಲ್ಲಿಸಲು ಸೂಚಿಸಿದೆ.
ಅರ್ಜಿ ಹಾಗೂ ದಾಖಲೆಗಳ ಹಾರ್ಡ್ ಪ್ರತಿಗಳನ್ನು ಸಂಬಂಧಪಟ್ಟ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಗಳಿಗೆ ಕಛೇರಿಗಳನ್ನು ಸಂಪರ್ಕಿಸಲು ವಿನಂತಿಸಿದೆ. ಅಧಿಕಾರಿಗಳ ದೂರವಾಣಿ ಸಂಖ್ಯೆಗಳು ಈ ಕೆಳಕಂಡಂತಿವೆ.