ಆಧಾರ್, ರೇಷನ್ ಕಾರ್ಡ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ 5 ಸಾವಿರ ರೂ: ನೇಕಾರ ಸಮ್ಮಾನ್ ಯೋಜನೆಯಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ಇಲಾಖೆಯು ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ನೇಕಾರಿಕೆ ವೃತ್ತಿಯಲ್ಲಿ ತೊಡಗಿರುವ ನೇಕಾರರಿಗೆ ವಾರ್ಷಿಕವಾಗಿ 5,000 ರೂ. ನೀಡಲು ನೇಕಾರರ ಸಮ್ಮಾನ್ ಯೋಜನೆಯಡಿ ಈಗಾಗಲೇ 2025-26 ನೇ ಸಾಲಿಗೆ ನೋಂದಾಯಿತರಾಗಿರುವ ನೇಕಾರರಿಂದ ಹಾಗೂ ನೇಕಾರಿಕೆಗೆ ಸಂಬAಧಿಸಿದ ಇತರೆ ಚಟುವಟಿಕೆಗಳಲ್ಲಿ ತೊಡಗಿರುವ ಕೈಮಗ್ಗ/ ವಿದ್ಯುತ್ ಮಗ್ಗ ನೇಕಾರರಿಂದ ಹೊಸದಾಗಿ ಅರ್ಜಿಗಳನ್ನು ಪಡೆದು ಅರ್ಹರಿರುವ ನೇಕಾರರ ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ನಲ್ಲಿ ಅಪ್‌ಲೋಡ್ ಮಾಡಲು ಕೇಂದ್ರ ಕಚೆÃರಿ ಪತ್ರದಲ್ಲಿ ಸೂಚಿಸಲಾಗಿರುತ್ತದೆ.

ಅದರಂತೆ 2024-25 ನೇ ಸಾಲಿನಲ್ಲಿ ಸದರಿ ಯೋಜನೆಯಡಿ ಈಗಾಗಲೇ ಸೌಲಭ್ಯ ಪಡೆದಿರುವ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಂದ ಹಾಗೂ ಕೈಮಗ್ಗ /ವಿದ್ಯುತ್ ಮಗ್ಗ ನೇಯ್ಗೆಗೆ ಸಂಬಂದಿಸಿದ ಇತರೆ ಚಟುವಟಿಕೆಯಲ್ಲಿ ತೊಡಗಿರುವ ಅರ್ಹ ನೇಕಾರರಿಂದ /ನೇಕಾರ ಸಹಕಾರ ಸಂಘಗಳ ಮೂಲಕ ಅರ್ಜಿ ಪಡೆಯಲಾಗುತ್ತಿದೆ.

ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಈ ಕೆಳಕಂಡ ದಾಖಲಾತಿಗಳೊಂದಿಗೆ ನೇಕಾರ ಸಹಕಾರ ಸಂಘಗಳ ಮೂಲಕ ಅಥವಾ ನೇರವಾಗಿ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಬಿ.ಎಂ. ರಸ್ತೆ, ಹೆಚ್.ಡಿ.ಸಿ.ಸಿ ಬ್ಯಾಂಕ್ ಹತ್ತಿರ, ಡೈರಿ ಸರ್ಕಲ್, ಹಾಸನ ಕಚೇರಿಗೆ ಸೆ.15 ರೊಳಗಾಗಿ ಸಲ್ಲಿಸುವುದು.

ದಾಖಲಾತಿಗಳು:

ಆಧಾರ್ ಕಾರ್ಡ, ರೇಷನ್ ಕಾರ್ಡ, ನೇಕಾರ ಸಮ್ಮಾನ್ ಐ.ಡಿ/ಪೆಹಚಾನ್ ಕಾರ್ಡ್, ಆದಾರ್(NPCI) ಲಿಂಕ್‌ಡ್ ಬ್ಯಾಂಕ್ ಪಾಸ್ ಬುಕ್ ಪ್ರತಿ, ಕೈಮಗ್ಗ/ವಿದ್ಯುತ್ ಮಗ್ಗ ನೇಕಾರಿಕೆ ಮಾಡುತ್ತಿರುವ ಪೋಟೋ, ಕೈಮಗ್ಗ/ವಿದ್ಯುತ್ ಮಗ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೂಲಿ ನೇಕಾರರ ಮಜೂರಿ ಪಾವತಿ ರಸೀದಿಗಳು ಇರಬೇಕು ಎಂದು ಜಿಲ್ಲಾ ಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read