ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಹುಬ್ಬಳ್ಳಿ-ಧಾರವಾಡ ಶಹರ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 113 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹುಬ್ಬಳ್ಳಿ-ಧಾರವಾಡ (ಶಹರ) ಕಚೇರಿಯಿಂದ ಪಡೆದು, ಸೆಪ್ಟೆಂಬರ್ 29, 2023 ರಂದು ಸಂಜೆ 5:30 ರೋಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹುಬ್ಬಳ್ಳಿ-ಧಾರವಾಡ (ಶಹರ) ಕಚೇರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ :0836-2440733 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read