ಧಾರವಾಡ : ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಧಾರವಾಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಹಾಗೂ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆ ಮತ್ತು ಕಾಲೇಜುಗಳಲ್ಲಿ ಎಲ್ಲಾ ವಿಷಯಗಳನ್ನು ಬೋಧಿಸಲು ತಾತ್ಕಾಲಿಕ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಆಸಕ್ತ ಸೂಕ್ತ ವಿದ್ಯಾರ್ಹತೆಯುಳ್ಳ ಶಿಕ್ಷಕರು ಮೇ 19, 2025 ರೊಳಗಾಗಿ https://dom.karnataka.gov.in/ ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2971590 ಗೆ ಅಥವಾ ಅಲ್ಪಸಂಖ್ಯಾತರ ತಾಲ್ಲೂಕಾ ಮಾಹಿತಿ ಕೇಂದ್ರಗಳಾದ ಧಾರವಾಡ-9738287549, ಹುಬ್ಬಳ್ಳಿ-8867718261, ನವಲಗುಂದ-8746894524, ಕಲಘಟಗಿ-8951674107, ಕುಂದಗೋಳ-8904661872 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
TAGGED:ಅತಿಥಿ ಶಿಕ್ಷಕ