ಶಿವಮೊಗ್ಗ : 2026-27ನೇ ಸಾಲಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ವಸತಿಶಾಲೆ-ಹಕ್ಕಿಪಿಕ್ಕಿ ಕ್ಯಾಂಪ್, ಸದಾಶಿವಪುರ ಶಿವಮೊಗ್ಗ ತಾಲೂಕು ಹಾಗೂ ಹಿರೇಮನೆ, ಸಾಗರ ತಾಲೂಕು ಇಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಒಂದು ವರ್ಷದ ಅವಧಿಗೆ ಖಾಲಿಯಿರುವ 8 ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.
ಕನ್ನಡ, ಇಂಗ್ಲೀಷ್, ಗಣಿತ, ವಿಜ್ಞಾನ, ಹಿಂದಿ, ಸಮಾಜವಿಜ್ಞಾನ ಹಾಗೂ ದೈಹಿಕ ಶಿಕ್ಷಣ ವಿಷಯಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಪಿ.ಯು.ಸಿ., ಡಿ.ಇಡಿ ಮತ್ತು ಟಿಇಟಿ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಬಿಎ/ಬಿಎಸ್ಸಿ, ಬಿ.ಇಡಿ ಹಾಗೂ ಟಿಇಟಿ ವಿದ್ಯಾರ್ಹತೆ ಕಡ್ಡಾಯವಾಗಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜೂ. 10 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-200266 ಹಾಗೂ ಶಿವಮೊಗ್ಗ ಮತ್ತು ಸಾಗರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವುದು.
ಜೂನ್ 6 ರಂದು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗ: ನಗರದ 110/11 ಕೆ.ವಿ. ವಿ.ವಿ.ಕೇಂದ್ರ, ಎಮ್.ಆರ್.ಎಸ್. ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 06 ರ ಶನಿವಾರದಂದು ಬೆಳಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಮ್.ಆರ್.ಎಸ್. ವಾಟರ್ ಸಪ್ಲೈ, ಎಮ್.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್. ರಸ್ತೆ (ಗಾಯತ್ರಿ ಕಲ್ಯಾಣ ಮಂಟಪದಿಂದ ಅಮೀರ್ ಅಹಮದ್ ವೃತ್ತದವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯ ರಸ್ತೆ, ಪಾರ್ಕ್ ಬಡಾವಣೆ.
ಸರ್.ಎಂ.ವಿ. ರಸ್ತೆ (ವೀರಭದ್ರೇಶ್ವರ ಚಿತ್ರ ಮಂದಿರದಿಂದ ಮಹಾವೀರ ವೃತ್ತದವರೆಗೆ), ಬಾಲರಾಜ್ ಅರಸ್ ರಸ್ತೆ (ಮಹಾವೀರ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿ ನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರ ಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಮೆಹದಿ ನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಬ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಕೋರಿದೆ.

