ಶಿವಮೊಗ್ಗ : ವೈದ್ಯಕೀಯ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ ? ವೈದ್ಯಾಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹೌದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಬ್ಯಾಕೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿಯಿರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ & ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಫೆ. 02 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ 1.00ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಮತ್ತು ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-222382 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.
ನೀರಿನ ಬಾಕಿ ಕಂದಾಯ ಪಾವತಿಸಲು ವಿಶೇಷ ಕೌಂಟರ್
ಶಿವಮೊಗ್ಗ.: ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಫೆ. 01 ರ ಭಾನುವಾರದಂದು ನಗರದ ವಿನೋಬನಗರ ಪೊಲೀಸ್ ಠಾಣೆ, ಪೊಲೀಸ್ ಚೌಕಿ ಹತ್ತಿರ, ಜಯನಗರ ನವೋದಯ ಶಾಲೆ ಹತ್ತಿರ, ಗುರುಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿರ, ಅಶೋಕನಗರ ನಂದಿನಿ ಬೂತ್ ಹತ್ತಿರ ಹಾಗೂ ಬಾಪೂಜಿನಗರ ಪಾರ್ಕ್ ಹತ್ತಿರ ವಿಶೇಷ ಕರ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದು ನೀರಿನ ಬಾಕಿ ಕಂದಾಯ ಹಾಗೂ ಬಾಕಿ ಕರವಸೂಲಾತಿ ಉಳಿಸಿಕೊಂಡಿರುವ ಗ್ರಾಹಕರು ಕಂದಾಯ ಪಾವತಿ ಮಾಡಿಕೊಳ್ಳಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

