HomeKarnataka'ರಾಷ್ಟ್ರೀಯ ಪೋಷಣ್' ಅಭಿಯಾನ ಯೋಜನೆಯಡಿ ತಾಲ್ಲೂಕು ಕಾರ್ಯಕ್ರಮ ಸಂಯೋಜಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

‘ರಾಷ್ಟ್ರೀಯ ಪೋಷಣ್’ ಅಭಿಯಾನ ಯೋಜನೆಯಡಿ ತಾಲ್ಲೂಕು ಕಾರ್ಯಕ್ರಮ ಸಂಯೋಜಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು :    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆ ಅನುಷ್ಠಾನಕ್ಕಾಗಿ ಗೌರವಧನ ಆಧಾರದ ಮೇಲೆ ತಾಲ್ಲೂಕು ಕಾರ್ಯಕ್ರಮ ಸಂಯೋಜಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಪೂರ್ವ ಹಾಗೂ ಬೆಂಗಳೂರು ಕೇಂದ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ತಲಾ ಒಂದು ಹುದ್ದೆಯಂತೆ ಒಟ್ಟು 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ರೂ.300 ಪಾವತಿಸಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ.ಎಚ್. ಮರಿಗೌಡ ರಸ್ತೆ, ಇಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 4, 2026 ರ ಸಂಜೆ 5.30 ಗಂಟೆಯೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ 080-29578688 ಅಥವಾ ಇ-ಮೇಲ್ [email protected] ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಂಬ್ರಾಯ್ಡರಿ & ಆರಿವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು :   ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಆಗಸ್ಟ್ 20 ರಿಂದ ಉಚಿತ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್‌ ಪೇಟಿಂಗ್ ಕುರಿತು 31 ದಿನಗಳ ಉಚಿತ ತರಬೇತಿಯು ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9481506564, 9380162042, 9241482541, 9113880324 ಅನ್ನು ಸಂಪರ್ಕಿಸಬಹುದು ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular