HomeKarnatakaJOB ALERT : ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

JOB ALERT : ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮಾಂತರ ಶಿಶು ಅಭಿವೃದ್ದಿ ಯೋಜನೆಯಡಿ ಬಳ್ಳಾರಿ ತಾಲ್ಲೂಕಿನ ವಿವಿಧ ಗ್ರಾಪಂ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೋಹನಕುಮಾರಿ ತಿಳಿಸಿದ್ದಾರೆ.

ಅರ್ಜಿಗಳನ್ನು ಸೆ.10 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಆಸಕ್ತ ಅರ್ಹ ಮಹಿಳೆಯರು https://karnemakaone.kar.nic.in/abcd/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ತಾಲ್ಲೂಕುವಾರು ಖಾಲಿ ಇರುವ ಹುದ್ದೆಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳ್ಳಾರಿ ತಾಲ್ಲೂಕಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 18 ಅಂಗನವಾಡಿ ಕಾರ್ಯಕರ್ತೆ, 34 ಅಂಗನವಾಡಿ ಸಹಾಯಕಿ. ಕುರುಗೋಡು ತಾಲ್ಲೂಕಿನ ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ 04 ಅಂಗನವಾಡಿ ಕಾರ್ಯಕರ್ತೆ, 21 ಅಂಗನವಾಡಿ ಸಹಾಯಕಿರ ಹುದ್ದೆಗಳಿಗೆ ಗೌರವ ಸೇವೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಅಥವಾ ದೂ.08392-266080 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಗನವಾಡಿ ಸಹಾಯಕಿಯರ ಹುದ್ದೆ

ನಗರ ಶಿಶು ಅಭಿವೃದ್ದಿ ಯೋಜನೆಯಡಿ ನಗರದ ವಿವಿಧ ವಾರ್ಡ್ಗಳಲ್ಲಿ ಖಾಲಿ ಇರುವ 64 ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾಗರಾಜ ಅವರು ತಿಳಿಸಿದ್ದಾರೆ.ಗೌರವಧನ ಆಧಾರದ ಮೇಲೆ ನೇಮಕಾತಿ ನಡೆಯಲಿದ್ದು, ಆಸಕ್ತ ಅರ್ಹ ಮಹಿಳೆಯರು ಸೆ.10 ರೊಳಗಾಗಿ https://karnemakaone.kar.nic.in/abcd/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಥವಾ ದೂ.08392-268609 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular