HomeJobsಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 3 ಅಂಗನವಾಡಿ ಕಾರ್ಯಕರ್ತೆ ಹಾಗೂ 36 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿರುತ್ತದೆ. ಆಸಕ್ತ ಮಹಿಳಾ ಅಭ್ಯರ್ಥಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು, ಅಧಿಸೂಚನೆಯಲ್ಲಿ ತಿಳಿಸಿರುವ ಸಂಬಂಧಿತ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಶಿಶು ಅಭಿವೃದ್ಧಿ ಯೋಜನಾ ಕಛೇರಿಯಲ್ಲಿ ಅರ್ಜಿ ಸಲ್ಲಿಸಲು ಕಾಯ್ದಿರಿಸಿದ ಪೆಟ್ಟಿಗೆಯಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ  ಹೊನ್ನಾಳಿ ಮತ್ತು ನ್ಯಾಮತಿ ದೂ.ಸಂ:08188-251283 ಸಂಪರ್ಕಿಸಬಹುದೆಂದು ಹೊನ್ನಾಳಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular