JOB ALERT : ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿವಾರು ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ತಾತ್ಕಾಲಿಕ ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಸಂಡೂರು ತಾಲ್ಲೂಕಿನ ಗೊಲ್ಲಲಿಂಗಮ್ಮನ ಹಳ್ಳಿ ಗ್ರಾಪಂ- 01, ಕಂಪ್ಲಿ ತಾಲ್ಲೂಕಿನ ನಂ.10 ಮುದ್ದಾಪುರ ಗ್ರಾಪಂ- 01, ಸಿರುಗುಪ್ಪ ತಾಲ್ಲೂಕಿನ ಹಚ್ಚೋಳ್ಳಿ, ಕೆಂಚನಗುಡ್ಡ ಗ್ರಾಪಂ- 02 ಸೇರಿ ಒಟ್ಟು 04 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಖಾಲಿಯಿದ್ದು, ಆಯಾ ತಾಲ್ಲೂಕಿನ ತಾಪಂ ಕಾರ್ಯ ನಿರ್ವಹಣಾ ಅಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ನಿಯಮಾನುಸಾರ ನೇಮಕ ಮಾಡಲಾಗುವುದು.

ಈ ಹುದ್ದೆಗಳಿಗೆ ಮಾಸಿಕ ಗೌರವಧನ ರೂ.10,000 ಇರುತ್ತದೆ. ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ ವಿಕಲಚೇತನರು (ಕರ್ತವ್ಯ ನಿರ್ವಹಿಸಲು ಸಮರ್ಥರಿರುವವರು) ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಆಯಾ ತಾಲ್ಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳಿಗೆ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 26 ಕೊನೆಯ ದಿನ.

*ಅರ್ಹತೆ:*

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಸ್ಥಳಿಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು (ಸ್ಥಳಿಯರಾಗಿರಬೇಕು). ವಯೋಮಿತಿ 18-45 ವರ್ಷದ ಆರೋಗ್ಯವಂತರಾಗಿರಬೇಕು. ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಿಕಲಚೇತನರ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ಅಂಗವಿಕಲರಾಗಿರಬೇಕು, ಭಾಗಶ: ಅಂಧರು, ಭಾಗಶ:ಶ್ರವಣ ದೋಷವುಳ್ಳವರು, (ಮೈಲ್ಡ್ ಮತ್ತು ಮಾಡರೇಟ್) ಹಾಗೂ ದೈಹಿಕ ಅಂಗವಿಕಲರಿಗೆ ಅವಕಾಶ ಕಲ್ಪಿಸುವುದು.

ಮೂರು ರೀತಿಯ ಅಂಗವಿಕಲರಿಗೆ ಸಮಾನವಾಗಿ ಆಯ್ಕೆ ಮಾಡಬೇಕು ಒಂದು ವರ್ಗದ ಅಂಗ ವಿಕಲರಿಗೆ ಆಯ್ಕೆಗೆ ಲಭ್ಯವಿಲ್ಲದಿದ್ದಲ್ಲಿ ಇನ್ನೊಂದು ವರ್ಗದಲ್ಲಿರುವ ಅಂಗವಿಕಲ ಅಭ್ಯರ್ಥಿ ಆಯ್ಕೆ ಮಾಡಲು ಕ್ರಮ ಕೈಗೊಳ್ಳಬೇಕು. ಮಹಿಳೆಯರಿಗೆ ಮೊದಲ ಆದ್ಯತೆ ನೀಡಬೇಕು. ಅಂಗವಿಕಲರಿಗೆ ಶೇ.40 ಕ್ಕಿಂತ ಮೇಲ್ಪಟ್ಟಿರಬೇಕು. ಅಂಗವಿಕಲರ ಬಗ್ಗೆ ವೈದ್ಯಕೀಯ ಮಂಡಳಿ ಪ್ರಮಾಣ ಪತ್ರ (ಗುರುತಿನ ಚೀಟಿ ಯುಡಿಐಡಿ ಕಾರ್ಡ್) ಹೊಂದಿರಬೇಕು.

ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ/ಸೌಲಭ್ಯ ಕಲ್ಪಿಸಲು ಸಧೃಡರಾಗಿರಬೇಕು. ಗೌರವಧನ ಅವಧಿ ಮುಂದುವರಿಸುವ ಬಗ್ಗೆ ಒಂದು ವರ್ಷದ ನಂತರ ಅವರ ಕಾರ್ಯ ವೈಖರಿಗೊಳಪಟ್ಟಿದ್ದು ಮುಂದುವರಿಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಆಯ್ಕೆ ಮಾಡುವಾಗ ಸರ್ಕಾರ ನಿಗದಿಪಡಿಸಿರುವ ಕರ್ತವ್ಯಗಳನ್ನು ನಿರ್ವಹಿಸಲು “ಸಮರ್ಥಕ” ಎಂಬ ಬಗ್ಗೆ ಪರಿಶೀಲಿಸಿ ಆಯ್ಕೆ ಮಾಡುವುದು. ಹುದ್ದೆಯು ಗೌರವಧನದ ಆಧಾರದ ಮೇಲೆ ಇರುವುದರಿಂದ ಇವರನ್ನು ಯಾವಾಗ ಬೇಕಾದರು ಕೆಲಸದಿಂದ ತೆಗೆದು ಹಾಕ ಬಹುದಾಗಿ/ಬಿಡುಗಡೆ ಮಾಡಬಹುದಾಗಿದೆ. ಗೌರವಧನದ ಆಧಾರದ ಮೇಲೆ ಕೆಲಸ ನಿರ್ವಹಿಸುವುದರಿಂದ ಖಾಯಂಗೊಳಿಸುವAತೆ ಕೋರಲು ಅವಕಾಶವಿಲ್ಲ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಎಂಆರ್‌ಡಬ್ಲೂö್ಯ ಗಳಾದ ಸಂಡೂರು (ಕರಿಬಸಜ್ಜ) ಮೊ.9632052270, ಕಂಪ್ಲಿ/ಬಳ್ಳಾರಿ (ರಾಣಿ)ಮೊ.8880875620, ಸಿರುಗುಪ್ಪ (ಸಾಬೇಶ) ಮೊ.9743509698, ಜಿಲ್ಲಾ ಸಂಯೋಜಕ (ಕೆ.ಟೇಕರಾಜ್) ಮೊ.9481320119 ಮತ್ತು ನಗರದ ಕಂಟೋನ್ ಮೆಂಟ್ ಪ್ರದೇಶದ ಶಾಂತಿಧಾಮ ಆವರಣದ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಥವಾ ಕಚೇರಿ ದೂ.08392267886 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read