HomeLatest Newsಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹೊಸದುರ್ಗ ಶಿಶು ಅಭಿವೃದ್ಧಿ ಯೋಜನೆ ಕಚೇರಿ ವ್ಯಾಪ್ತಿಯಲ್ಲಿ ಖಾಲಿ ಇರುವ 11 ಅಂಗನವಾಡಿ ಕಾರ್ಯಕರ್ತೆ, 53 ಸಹಾಯಕಿರು ಸೇರಿ 64 ಹುದ್ದೆಗಳನ್ನು ಗೌರವ ಸೇವೆಯ ಆಧಾರದಲ್ಲಿ ನೇಮಕಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ದ್ವೀತಿಯ ಪಿಯುಸಿ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. 19 ರಿಂದ 35 ವರ್ಷದೊಳಗಿನ ಸ್ಥಳೀಯ ಮಹಿಳಾ ಅಥವಾ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸೆಪ್ಟೆಂಬರ್ 5 ಸಂಜೆ 5:30ರ ಒಳಗಾಗಿ ವೆಬ್‍ಸೈಟ್ https://karnemakaone.kar.inc.in/abcd/ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಬಳಕೆದಾರರ ಕೈಪಿಡಿಯಲ್ಲಿನ ಸೂಚನೆಗಳನ್ನು ಸ್ಪಷ್ಟಾವಾಗಿ ಓದಿಕೊಳ್ಳಬೇಕು. ಮೀಸಲಾತಿ ವಿವರ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಹೊಸದುರ್ಗ ನಗರದ ಟಿ.ಬಿ.ವೃತ್ತದಲ್ಲಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಭವನದ ಕಟ್ಟಡದಲ್ಲಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular