ದಾವಣಗೆರೆ: ದಾವಣಗೆರೆ ಮಹಾ ನಗರಪಾಲಿಕೆ ಮತ್ತು ಹರಿಹರ ನಗರಸಭೆಯಲ್ಲಿ ನೇರ ಪಾವತಿಯಡಿಯಲ್ಲಿ ಖಾಲಿ ಇರುವ ಪೌರ ಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನೇರ ಪಾವತಿಯಡಿ ಪೌರಕಾರ್ಮಿಕರ ನೇಮಕಾತಿಗೆ ನಿಗದಿಪಡಿಸಿದ ವಯೋಮಿತಿ, ವಿದ್ಯಾರ್ಹತೆ, ಅರ್ಹತೆಗಳು, ನೇಮಕಾತಿ ಷರತ್ತುಗಳು ವಿಶೇಷ ಸೂಚನೆಗಳು ಹಾಗೂ ಇತರೆ ಅಗತ್ಯ ಮಾಹಿತಿಯನ್ನು ಮಹಾನಗರಪಾಲಿಕೆಯ ಅಧಿಕೃತ ವೆಬ್ ಸೈಟ್ http://www.davanegerecity.mrc.gov.in ಹರಿಹರ ನಗರಸಭೆಯ ಅಧಿಕೃತ ವೆಬ್ ಸೈಟ್ http://davanageredude.mrs.gov.in ಹಾಗೂ ಜಿಲ್ಲಾ ನಗರಾಭಿವೃದ್ದಿ ಕೋಶದ ಅಧಿಕೃತ ವೆಬ್ ಸೈಟ್ hಣಣಠಿ://http://www.hariharcity.mic.gov.in ನಲ್ಲಿ ನೋಡಬಹುದೆಂದು ಜಿಲ್ಲಾಧಿಕಾರಿ ಹಾಗೂ ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

