ಬೆಂಗಳೂರು : ಬೆಂಗಳೂರು ಉತ್ತರ ಜಿಲ್ಲಾ ಗೃಹರಕ್ಷಕ ದಳ ಸ್ವಯಂ ಸೇವಕ ಗೃಹರಕ್ಷಕರ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.
ಎಸ್.ಎಸ್.ಎಲ್.ಸಿ ಪಾಸಾದವರು 20 ರಿಂದ 50 ವರ್ಷಗಳ ವಯೋಮಿತಿ ಒಳಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಸಮಾದೇಷ್ಟರ ಕಚೇರಿ, ಗೃಹರಕ್ಷಕ ದಳ, ಬೆಂಗಳೂರು ಉತ್ತರ ಜಿಲ್ಲೆ, ವೆಸ್ಟ್ ಆಫ್ ಕಾರ್ಡ್ ರಸ್ತೆ, ಅಗ್ನಿಶಾಮಕ ಠಾಣೆ, ರಾಜಾಜಿನಗರ, ಬೆಂಗಳೂರು ಇಲ್ಲಿ ಭೇಟಿ ನೀಡಿ ಉಚಿತವಾಗಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ 080-23142852 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.