ಧಾರವಾಡ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ನೇಮಕಾತಿಯ ಪರಿಷ್ಕøತ ಮಾರ್ಗಸೂಚಿಯಂತೆ ಹಾಗೂ ಜಿಲ್ಲಾಧಿಕಾರಿಗಳವರ ಅನುಮೋದನೆಯಂತೆ ಧಾರವಾಡ ಜಿಲ್ಲೆಯ 6 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 19 ಅಂಗನವಾಡಿ ಕಾರ್ಯಕರ್ತೆ ಮತ್ತು 210 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳ ಭರ್ತಿಗಾಗಿ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮಹಿಳಾ ಅಭ್ಯರ್ಥಿಗಳು ಸಪ್ಟೆಂಬರ್ 3, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನೆಗಳಾದ ಧಾರವಾಡ (ಗ್ರಾಮೀಣ) ದೂರವಾಣಿ ಸಂ:0836-2444838, ಹುಬ್ಬಳ್ಳಿ (ಗ್ರಾಮೀಣ) ದೂರವಾಣಿ ಸಂ: 0836-2377288, ಹುಬ್ಬಳ್ಳಿ-ಧಾರವಾಡ (ಶಹರ) ದೂರವಾಣಿ ಸಂ:0836-2440733, ಕಲಘಟಗಿ ದೂರವಾಣಿ ಸಂ:08370-284532, ಕುಂದಗೋಳ ದೂರವಾಣಿ ಸಂ:08304-290561 ಹಾಗೂ ನವಲಗುಂದ ದೂರವಾಣಿ ಸಂ: 08380-229618 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.28 ರಂದು ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮ ಆಯೋಜನೆ
ಧಾರವಾಡ (ಕರ್ನಾಟಕ ವಾರ್ತೆ) : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಇವರ ಪ್ರಾಯೋಜಿಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಇವರು ಸ್ವಂತ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವ ನಿರುದ್ಯೋಗ ಯುವಕ, ಯುವತಿಯರಿಗೆ ಹಾಗೂ ಮಹಿಳೆಯರಿಗೆ 1 ದಿನದ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮವನ್ನು ಜುಲೈ 28, 2026 ರಂದು ಬೆಳಿಗ್ಗೆ 10 ಗಂಟೆಗೆ ಧಾರವಾಡ ಮಹಿಷಿ ರೋಡದಲ್ಲಿರುವ ವಿವೇಕಾ ಗ್ರಾಮೀಣ ಜೀವನಾಧಾರ ಕೇಂದ್ರ ಶಾರದಾ ಚಾರಿಟೇಬಲ್ ಟ್ರಸ್ಟ್ ಬಿಲ್ಡಿಂಗ್ದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಆಸಕ್ತರಿಗೆ ಪ್ರೆರೇಪಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು, ಪ್ರೋತ್ಸಾಹ, ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು.ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಕೊರಲಾಗಿದೆ. ಭಾಗವಹಿಸುವವರು ಕನಿಷ್ಠ 18 ವರ್ಷದವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು. ಮಹಿಳೆಯರಿಗೆ ಆದ್ಯತೆ ನೀಡಲಾಗುವದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ: 8792343840 ಸಂಪರ್ಕಿಸಬಹುದು ಎಂದು ಸಿಡಾಕ್ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

