ಕಾನೂನು ಪದವೀಧರರಿಗೆ ವಕೀಲ ವೃತ್ತಿಯ ತರಬೇತಿಗಾಗಿ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ2025-26ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ ಕಾನೂನು ಪದವೀಧರರಿಂದ ನ್ಯಾಯಾಂಗ ಆಡಳಿತದಲ್ಲಿ 4 ವರ್ಷಗಳ ಅವಧಿಗೆ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಕುಂಟುಬದ ವಾರ್ಷಿಕ ಆದಾಯವು ರೂ.3.50.000/-ಕ್ಕೆ ಮೀರಿರಬಾರದು. ಅಭ್ಯರ್ಥಿಗಳು ಬಾರ್ ಕೌನ್ಸಿಲ್ನಲ್ಲಿ ಹೆಸರನ್ನು ನೊಂದಾಯಿಸಿರಬೇಕು. ಅಭ್ಯರ್ಥಿಯು ಕಾನೂನು ಪದವೀಧರರಾಗಿದ್ದು, ಈ ತರಬೇತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷಗಳೊಳಗೆ ಇರಬೇಕು. ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ ರೂ.5000/-ಗಳ ತರಬೇತಿ ಭತ್ಯೆಯನ್ನು ನೀಡಲಾಗುವುದು.

ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ನಿಗದಿತ ಅವಧಿಯೊಳಗೆ ಕಛೇರಿ ವೇಳೆಯಲ್ಲಿ ಪಡೆದು ಭರ್ತಿ ಮಾಡಲಾದ ಅರ್ಜಿಗಳನ್ನು ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್.ವಿ.ವಿ ಗೋಪುರ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು 560001 ಇಲ್ಲಿ ಸೆಪ್ಟೆಂಬರ್ 08,2025 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಭರ್ತಿ ಮಾಡಲಾದ ಅರ್ಜಿಯೊಂದಿಗೆ ಅವಶ್ಯಕ ಮಾಹಿತಿಗಳಾದ ಕಾನೂನು ಪದವಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಗಳ ದೃಢೀಕರಣ ಪ್ರತಿ ಹಾಗೂ ಜನ್ಮ ದಿನಾಂಕದ ಆಧಾರಕ್ಕಾಗಿ ಎಸ್.ಎಸ್.ಎಲ್.ಸಿ.ಅಂಕಪಟ್ಟಿ ಅಥವಾ ಟಿ.ಸಿ. ದೃಢೀಕೃತ ಪ್ರತಿ ಹಾಗೂ ಆಹಾರ ಪಡಿತರ ಚೀಟಿ ಅಥವಾ ತಹಶೀಲ್ದಾರ್ರವರಿಂದ ಪಡೆದ ವಾಸಸ್ಥಳದ ದೃಢೀಕೃತ ಪತ್ರ ಸಲ್ಲಿಸಬೇಕು. ಅಪೂರ್ಣ ಮಾಹಿತಿಗಳಿಂದ ಕೂಡಿದ ಅರ್ಜಿಗಳನ್ನು ಹಾಗೂ ನಿಗದಿತ ದಿನಾಂಕ/ವೇಳೆ ಮೀರಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:080-22866718 ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read