HomeKarnatakaಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ  ಜನವರಿ 30 ಮತ್ತು 31 ರಂದು  ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.      

ತರಬೇತಿಗೆ ಹಾಜರಾಗುವ ರೈತರು ಆಧಾರ್‍ಕಾರ್ಡ್ ಜೆರಾಕ್ಸ್, 2 ಪಾಸ್‍ಪೆÇೀರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು. ತರಬೇತಿಯಲ್ಲಿ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದಾವಣಗೆರೆ ದೂ. 08192-233787 ಗೆ ಸಂಪರ್ಕಿಸಬಹುದೆಂದು ಮುಖ್ಯ ಪಶು ವೈದ್ಯಾಧಿಕಾರಿ ಚಂದ್ರಶೇಖರ್ ಸುಂಕದ್  ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular