HomeLatest NewsGOOD NEWS : ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಸೇರಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ...

GOOD NEWS : ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಸೇರಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಹಾಗೂ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಗಳ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು https://ssp.postmatric.karnataka.gov.in ವೆಬ್‍ಸೈಟ್ ಮೂಲಕ ಸಪ್ಟೆಂಬರ 30, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular