ಪರಿಶಿಷ್ಟರ ಅಭಿವೃದ್ಧಿಗಾಗಿ ವಿವಿಧ ಆರ್ಥಿಕ ಯೋಜನೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲೆಯ ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ 2025-26 ನೇ ಸಾಲಿಗೆ ವಿವಿಧ ಯೋಜನೆಗಳಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಸಲ್ಲಿಸಲು ಸೆ.10 ರಂದು ಕೊನೆಯ ದಿನವಾಗಿದ್ದು, 2023-24 ಮತ್ತು 2024-25 ನೇ ಸಾಲಿನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿದವರು ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ವಿವಿಧ ಆರ್ಥಿಕ ಯೋಜನೆಗಳಾದ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಫಾಸ್ಟ್ ಫುಡ್ ಟ್ರಕ್ ಟ್ರೆöÊಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್, ಹೈನುಗಾರಿಕೆ ಯೋಜನೆ, ಕುರಿ ಸಾಕಾಣಿಕೆ ಯೋಜನೆ, ಮೈಕ್ರೋಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಹಾಗೂ ಭೂ ಒಡೆತನ ಯೋಜನೆಗಳಿಗೆ ಶಿವಮೊಗ್ಗ-1, ಗ್ರಾಮ-1, ಕರ್ನಾಟಕ-1, ಸೇವಾ ಸಿಂಧು, ಪೋರ್ಟಲ್ ಮೂಲಕ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://sevasindhu.karnataka.gov.in ಹಾಗೂ ದೂ.ಸಂ.08182-224349 ನ್ನು ಸಂಪರ್ಕಿಸಬಹುದು ಎಂದು ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read