JOB ALERT : ಬೆಂಗಳೂರಿನಲ್ಲಿ ಉದ್ಯೋಗವಕಾಶ : ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಆಹಾರ ಮತ್ತು ಪೌಷ್ಠಿಕ ಭದ್ರತೆ ಯೋಜನೆಯಡಿ ಬೆಂಗಳೂರು ಜಿಲ್ಲೆಯಲ್ಲಿ ನೇರಗುತ್ತಿಗೆ ಆಧಾರದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಹೊಸದಾಗಿ ಸೃಜಿಸಿರುವ ಯೋಜನಾ ನಿರ್ವಹಣಾ ತಂಡ (PMT) ಜಿಲ್ಲಾ ಮಟ್ಟದ ಸಲಹೆಗಾರರು- 1 ಹುದ್ದೆ ಮತ್ತು ತಾಂತ್ರಿಕ ಸಹಾಯಕರು – 2 ಹುದ್ದೆಗಳು ಹೊರಗುತ್ತಿಗೆ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಜಿಲ್ಲಾ ಮಟ್ಟದ ಸಲಹೆಗಾರರ ಹುದ್ದೆಗೆ- BSC Agricultural ಪದವಿ ಹೊಂದಿದ್ದು, Agronomy/ soil Science / plant protection or Any Other Agricultural Subjects with Computer knowledge ಹಾಗೂ ತಾಂತ್ರಿಕ ಸಹಾಯಕರು ಹುದ್ದೆಗೆ BSC Agriculture ಪದವಿ with Computer knowledge ಹೊಂದಿರಬೇಕು.

ಅರ್ಜಿಗಳನ್ನು ಸೂಕ್ತ ದಾಖಲೆಗಳೊಂದಿಗೆ ಆಗಸ್ಟ್ 29 ರೊಳಗಾಗಿ ಕಚೇರಿಯ ಅವಧಿಯೊಳಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೃಷಿ ಸಂಕೀರ್ಣ, ಎಸ್ ಕರಿಯಪ್ಪ ರಸ್ತೆ (ಕನಕಪುರ ರಸ್ತೆ) ಬನಶಂಕರಿ, ಬೆಂಗಳೂರು- 560070, ಇಲ್ಲಿ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read