HomeLatest News'ಡೇ-ನಲ್ಮ್' ಅಭಿಯಾನದಡಿ ಅರ್ಹ ಮಹಿಳಾ ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನ

‘ಡೇ-ನಲ್ಮ್’ ಅಭಿಯಾನದಡಿ ಅರ್ಹ ಮಹಿಳಾ ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನ

ಕೇಂದ್ರ ಪುರಸ್ಕ್ರತ್ ಅಮೃತ್-2.0 ಅಭಿಯಾನದ ಅಮೃತ್ ಮಿತ್ರ ಕಾರ್ಯಕ್ರಮದ ತಾಂತ್ರಿಕೇತರ ಚಟುವಟಿಕೆಯಡಿ ಕಾರ್ಯಕ್ರಮದಡಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಸಾರ್ವಜನಿಕ ಉದ್ಯಾನವನ ಹಾಗೂ ಆಟದ ಮೈದಾನ ನಿರ್ವಹಣೆ ಮಾಡಲು ಡೇ-ಎನ್ ಯುಎಲ್ಎಂ ಅಭಿಯಾನದಡಿ ಅರ್ಹ ಮಹಿಳಾ ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರ ಸರ್ಕಾರವು ಅಮೃತ್ ಯೋಜನೆಯಡಿ ಅಮೃತ್ ಮಿತ್ರ ಹಂತ-2 ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದ್ದು, ಅಮೃತ್-2.0 ಅಭಿಯಾನದಡಿಯ ವಿವಿಧ ತಾಂತ್ರಿಕ ಮತ್ತು ತಾಂತ್ರಿಕೇತರ ಚಟುವಟಿಕೆಗಳನ್ನು ಕೇಂದ್ರ ಪುರಸ್ಕ್ರತ್ ಯೋಜನೆಯಾದ ಡೇ-ನಲ್ಮ್ ಅಭಿಯಾನದಡಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಮಹಿಳಾ ಸ್ವ-ಸಹಾಯ ಗುಂಪುಗಳ ಮೂಲಕ ಸದರಿ ಚಟುವಟಿಕೆಗಳನ್ನು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಠಾನಗೊಳಿಸಲು ಆಸಕ್ತಿ ಇರುವ ಮಹಿಳಾ ಸ್ವ-ಸಹಾಯ ಗುಂಪುಗಳು ಭಾಗವಹಿಸಬಹುದಾಗಿರುತ್ತದೆ.

ಆಸಕ್ತಿ ಇರುವ ಮಹಿಳಾ ಸ್ವ-ಸಹಾಯ ಗುಂಪುಗಳು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಡೇ-ನಲ್ಮ್ ಹುಬ್ಬಳ್ಳಿ ಹಾಗೂ ಧಾರವಾಡ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, 10 ದಿವಸಗಳೊಳಗಾಗಿ ಅರ್ಹ ಮತ್ತು ಆಸಕ್ತ ಮಹಿಳಾ ಸ್ವ ಸಹಾಯ ಗುಂಪುಗಳು ತಮ್ಮ ಪ್ರಸ್ತಾವನೆಯನ್ನು ಮುಚ್ಚಿದ ಲಕೋಟೆಯಲ್ಲಿ ಸೀಲು ಮಾಡಿ ಆಯುಕ್ತರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಹುಬ್ಬಳ್ಳಿ ರವರಿಗೆ ಸಲ್ಲಿಸಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular