HomeLatest News2 ವರ್ಷಗಳ ಡಿಪ್ಲೊಮಾ ಕೃಷಿ ಪದವಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

2 ವರ್ಷಗಳ ಡಿಪ್ಲೊಮಾ ಕೃಷಿ ಪದವಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

ಮಡಿಕೇರಿ :   ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೊಮಾ  ಕೃಷಿ ಪದವಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿಡಿಪ್ಲೊಮಾ (ಕೃಷಿ) ಕೋರ್ಸ್‍ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾμÉಯಾಗಿ ಅಭ್ಯಸಿಸಿ ಕನಿಷ್ಟ ಶೇ.45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.(ಪ.ಜಾ./ಪ.ಪಂ./ಪ್ರವರ್ಗ-1 ರವರುಗಳಿಗೆ ಕನಿಷ್ಠ ಶೇ.40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು). ದಿನಾಂಕ: 12-06-2026 ರಂದು ಅಭ್ಯರ್ಥಿಗಳ ವಯಸ್ಸು 19 ವರ್ಷಗಳನ್ನು ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50 ರಷ್ಟು ಸೀಟುಗಳನ್ನು ಡಿಪೆÇ್ಲಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ. ಅಧಿಸೂಚನೆ, ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ವೆಬ್‍ಸೈಟ್ www.uahs.edu.in ನಲ್ಲಿ ಜೂನ್, 12 ರವರೆಗೆ ಡೌನ್ ಲೋಡ್ ಮಾಡಬಹುದು. ಈ ರೀತಿ ವೆಬ್‍ಸೈಟ್ ಮುಖಾಂತರ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಮತ್ತು ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ.ರೂಪದಲ್ಲಿ ಲಗತ್ತಿಸಿ, ಜೂನ್, 12 ರೊಳಗೆ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ-577412 ಇಲ್ಲಿಗೆ ಕಳುಹಿಸಿಕೊಡಬೇಕು. ಜೂನ್, 12 ರ ನಂತರ ಡಿ.ಡಿ. ಯನ್ನು ಪಡೆದು ಸಲ್ಲಿಸುವ ಅರ್ಜಿಯನ್ನು ತಿರಸ್ಕರಿಸಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದವರಿಗೆ ರೂ. 500, ಪ.ಜಾ./ಪ.ಪಂ./ಪ್ರವರ್ಗ-1ರವರಿಗೆ ರೂ. 250 ಆಗಿದ್ದು, ರಾಷ್ಟ್ರೀಕೃತ ಬ್ಯಾಂಕ್‍ಗಳ ಡಿ.ಡಿ. ಯನ್ನು Comptroller, KSNUAHS, Shivamogga–577412 ಇವರ ಹೆಸರಿನಲ್ಲಿ ಪಡೆದು ಎಲ್ಲಾ ಅಗತ್ಯ ಅಡಕಗಳೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ- 577412 ಇಲ್ಲಿಗೆ ಜೂನ್, 12 ರ ಸಂಜೆ 04 ಗಂಟೆ ಒಳಗೆ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದು. ಜೂನ್, 12 ರ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರವೇಶ ಮತ್ತು ಆಯ್ಕೆ ವಿಧಾನ: ಸರ್ಕಾರದ ಆದೇಶಗಳ ಅನ್ವಯ ಸೀಟುಗಳನ್ನು ಭರ್ತಿ ಮಾಡಲಾಗುವುದು. ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ದತಿಯನ್ನು ಅಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರ ಹಾಗೂ ವೆಬ್‍ಸೈಟ್ ಮುಖಾಂತರ ತಿಳಿಸಲಾಗುವುದು ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ. ಕುಲಸಚಿವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular