ಹಾವೇರಿ: ಪ್ರಸಕ್ತ ಸಾಲಿಗೆ ಜಿಲ್ಲಾ ಖನಿಜ ಪ್ರತಿಷ್ಠಾನ ಅಡಿ ಫೈಬರ್ಬುಟ್ಟಿ ಹಾಗೂ ಲೈಫ್ ಜಾಕೆಟ್ ಸೌಲಭ್ಯಕ್ಕೆ ಜಿಲ್ಲೆಯ ನದಿ ಹಾಗೂ ಜಲಾಶಯದಲ್ಲಿ ಮೀನುಗಾರಿಕೆ ನಡೆಸುವ ವೃತ್ತಿನಿರತ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮೀನುಗಾರರು ಡಿ. 30ರೊಳಗಾಗಿ ಸಂಬಂಧಪಟ್ಟ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

