HomeKarnatakaಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ

ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ

ತುಮಕೂರು: ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ 2026-27 ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನುಗಾರರು/ಮೀನು ಕೃಷಿಕರಿಗೆ ಸಹಾಯ ಧನ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ.

ಹೊಸ ಮೀನು ಕೃಷಿ ಕೊಳ ನಿರ್ಮಾಣ(ಸಿಹಿ ನೀರಿನ ಜಲಕೃಷಿಗೆ ಹೂಡಿಕೆ ವೆಚ್ಚಗಳು ಸೇರಿದಂತೆ), ಸಿಹಿನೀರಿನ ಪ್ರದೇಶಗಳಿಗೆ ಬಯೋಫ್ಲೋಕ್ ಕೊಳಗಳ ನಿರ್ಮಾಣ(ಹೆಕ್ಟೇರಿಗೆ/4 ಲಕ್ಷ ರೂ. ಹೂಡಿಕೆ ವೆಚ್ಚ ಸೇರಿದಂತೆ), ಅಕ್ಕೇರಿಯಂ/ಅಲಂಕಾರಿಕ ಮೀನುಗಳ ಕಿಯೋಸ್ಕ್ ಸೇರಿದಂತೆ ಮೀನು ಕಿಯೋಸ್ಕ್‌ಗಳ ನಿರ್ಮಾಣ, ಶಾಖ ನಿರೋಧಕ ವಾಹನ ಹಾಗೂ ಜೀವಂತ ಮೀನು ಮಾರಾಟ ಕೇಂದ್ರ ಕಾರ್ಯಕ್ರಮಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಜೂನ್ 18 ಕಡೆಯ ದಿನವಾಗಿದ್ದು, ಆಸಕ್ತ ಮೀನುಗಾರರು/ಮೀನು ಕೃಷಿಕರು ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ನಿಗದಿತ ನಮೂನೆಯ ಅರ್ಜಿಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜೂನ್ 18ರೊಳಗೆ ಸಲ್ಲಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೂ.11 ರಂದು ಡಾಕ್ ಅದಾಲತ್: ಸಾರ್ವಜನಿಕರ ಕುಂದುಕೊರತೆ ಆಲಿಕೆಗೆ ಅವಕಾಶ

ಬಳ್ಳಾರಿ :   ಬಳ್ಳಾರಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ಅಂಚೆ ಕಚೇರಿಗಳಿಗೆ ಸಂಬಂಧಿಸಿದ ಸಾರ್ವಜನಿಕರ ದೂರುಗಳು ಹಾಗೂ ಕುಂದುಕೊರತೆಗಳ ನಿವಾರಣೆಗಾಗಿ ಜೂನ್ 11 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಪ್ರದೇಶದಲ್ಲಿರುವ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ಡಾಕ್ ಅದಾಲತ್ (ಅಂಚೆ ಅದಾಲತ್) ಹಮ್ಮಿಕೊಳ್ಳಲಾಗಿದೆ.

ಅಂಚೆ ಇಲಾಖೆಯ ಸೇವೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮಲ್ಲಿರುವ ಕುಂದುಕೊರತೆಗಳು ಅಥವಾ ದೂರುಗಳನ್ನು ಲಿಖಿತ ರೂಪದಲ್ಲಿ ಸವಿಸ್ತಾರವಾಗಿ ಬರೆದು, ಜೂನ್ 10 ರ ಸಂಜೆ 04 ಗಂಟೆಯ ಒಳಗಾಗಿ ತಲುಪುವಂತೆ ಅಂಚೆ ಅಧೀಕ್ಷಕರು, ಬಳ್ಳಾರಿ ವಿಭಾಗ, ಬಳ್ಳಾರಿ-583102 ಈ ವಿಳಾಸಕ್ಕೆ ಕಳುಹಿಸಿಕೊಡಬೇಕು.

ಸಾರ್ವಜನಿಕರು ತಮ್ಮ ದೂರುಗಳನ್ನು [email protected] ಇ-ಮೇಲ್ ವಿಳಾಸಕ್ಕೂ ಸಹ ಕಳುಹಿಸಬಹುದಾಗಿದೆ. ದೂರು ಸಲ್ಲಿಸಲು ಕೊನೆಯ ದಿನಾಂಕ ಜೂನ್ 10. ದೂರು ಸಲ್ಲಿಸಿದ ಅರ್ಜಿದಾರರು ಜೂನ್ 11 ರಂದು ನಡೆಯುವ ಡಾಕ್ ಅದಾಲತ್‌ನಲ್ಲಿ ಖುದ್ದಾಗಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular