ಗಮನಿಸಿ :  ‘ಗ್ರಾಮ ಒನ್ ಕೇಂದ್ರ’ಗಳಿಗೆ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 11 ಗ್ರಾಮ ಪಂಚಾಯತ್‍ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಪೊನ್ನಂಪೇಟೆ, ಬಿ.ಶೆಟ್ಟಿಗೇರಿ, ನಾಲ್ಕೇರಿ, ಕೆ.ಬಾಡಗ, ನಿಟ್ಟೂರು, ಬಲ್ಯಮಂಡೂರು, ದೇವರಪುರ, ಟಿ.ಶೆಟ್ಟಿಗೇರಿ, ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ, ಮಡಿಕೇರಿ ತಾಲ್ಲೂಕಿನ ಹಾಕತ್ತೂರು, ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ.

ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿ ಇ-ಮೇಲ್ ಐಡಿ care@blsinternational.net ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read