ಗಮನಿಸಿ : ‘ಗ್ರಾಮ ಒನ್ ಕೇಂದ್ರಗಳಿಗೆ’ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 25 ಗ್ರಾಮ ಪಂಚಾಯತ್ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ/ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪ್ರಾಂಚೈಸಿಗಳು https://www.gramaonebls.com/users/registration ಲಿಂಕ್ನ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪ್ರಾಜೆಕ್ಟ್ ಮ್ಯಾನೇಜರ್ ಅಥವಾ ಕೋ-ಆರ್ಡಿನೇಟರ್, ಜಿಲ್ಲಾಧಿಕಾರಿಗಳ ಕಚೇರಿ, ಮಡಿಕೇರಿ, ಇವರನ್ನು ಸಂಪರ್ಕಿಸಬಹುದು.(9611657344/ 9900385301) ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

25 ಗ್ರಾಮ ಪಂಚಾಯಿತಿಗಳ ವಿವರ ಇಂತಿದೆ. ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ, ಬೆಟ್ಟದಳ್ಳಿ, ಗರ್ವಾಲೆ, ನೆರುಗಳಲೆ, ತೋಳೂರು ಶೆಟ್ಟಳ್ಳಿ, ಹರದೂರು, ಕುಶಾಲನಗರ ತಾಲ್ಲೂಕಿನ ಕೆದಕಲ್, 7ನೇ ಹೊಸಕೋಟೆ, ನಾಕೂರು ಶಿರಂಗಾಲ, ಗುಡ್ಡೆಹೊಸೂರು, ವಿರಾಜಪೇಟೆ ತಾಲ್ಲೂಕಿನ ಕಾಕೋಟು ಪರಂಬು, ಬೆಟೋಳಿ, ಅಮ್ಮತ್ತಿ, ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು, ಬಲ್ಯಮಂಡೂರು, ಕೆ.ಬಾಡಗ, ಕುಟ್ಟ, ನಾಲ್ಕೇರಿ, ಬಿ.ಶೆಟ್ಟಿಗೇರಿ, ಕಿರುಗೂರು, ಪೊನ್ನಂಪೇಟೆ. ಮಡಿಕೇರಿ ತಾಲ್ಲೂಕಿನ ಮರಗೋಡು, ಹೊಸ್ಕೇರಿ, ಗಾಳಿಬೀಡು ಮತ್ತು ಕಡಗದಾಳು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read