HomeLatest Newsನಾಗಪುರದ 'ದೀಕ್ಷಾಭೂಮಿ' ಯಾತ್ರೆಗೆ ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ನಾಗಪುರದ ‘ದೀಕ್ಷಾಭೂಮಿ’ ಯಾತ್ರೆಗೆ ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನಿಸಲಾಗಿದೆ. ಯಾತ್ರೆಗೆ ತೆರಳುವ ಅರ್ಹ ಯಾತ್ರಾರ್ಥಿಗಳು ಇಲಾಖಾ ವೆಬ್‍ಸೈಟ್: www.swd.karnataka.gov.in ನಲ್ಲಿ ಆನ್‍ಲೈನ್ ಮೂಲಕ ಸೆಪ್ಟೆಂಬರ್, 09 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ದಾಖಲಾತಿಗಳನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿಗೆ ಸೆಪ್ಟೆಂಬರ್, 09 ರೊಳಗೆ ಸಲ್ಲಿಸುವುದು. ನಂತರ ಬಂದ ಅರ್ಜಿ ಸ್ವೀಕರಿಸಲಾಗುವುದಿಲ್ಲ.

ದೀಕ್ಷಾ ಭೂಮಿ ನಾಗಪುರಕ್ಕೆ ಹೋಗ ಬಯಸುವ ಯಾತ್ರಾರ್ಥಿಗಳು ಜಂಟಿ/ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಇವರಿಗೆ ಸೆಪ್ಟೆಂಬರ್, 9 ರೊಳಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಜಿಲ್ಲಾವಾರು ನಿಗದಿತ ಗುರಿಗಿಂತ ಹೆಚ್ಚು ಅರ್ಜಿಗಳು ಸ್ವೀಕೃತಗೊಂಡಲ್ಲಿ ವಯಸ್ಸಿನ ಶ್ರೇಷ್ಠತೆ ಆಧಾರದ ಮೇಲೆ ಆಯ್ಕೆ ಮಾಡುವುದು.

ಯಾತ್ರಾರ್ಥಿಗಳು ಕನಿಷ್ಠ 18 ವರ್ಷ ಮೇಲ್ಪಟ್ಟವರಾಗಿಬೇಕು. ಬಿಪಿಎಲ್ ಕಾರ್ಡ್ ಹೊಂದಿರಬೇಕು. ಸಮಾಜ ಕಲ್ಯಾಣ ಇಲಾಖಾ ವೆಬ್‍ಸೈಟ್ www.swd.karnataka.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕಡ್ಡಾಯವಾಗಿ ಆಧಾರ್ ಕಾರ್ಡ್ ಹೊಂದಿರಬೇಕು. ಮೊದಲು ಅರ್ಜಿ ಸಲ್ಲಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ನಿಗದಿಪಡಿಸಿದ ಗುರಿಗಳಿಗಿಂತ ಹೆಚ್ಚಿನ ಅರ್ಜಿ ಪರಿಗಣಿಸಲಾಗುವುದಿಲ್ಲ. ಯಾತ್ರಾರ್ಥಿಗಳು ಆಧಾರ್ ಕಾರ್ಡ್/ ರೇಷನ್ ಕಾರ್ಡ್‍ಗಳ ಪ್ರತಿಯನ್ನು ಅರ್ಜಿಯೊಂದಿಗೆ ಅಪ್‍ಲೋಡ್ ಮಾಡುವುದು. ಎಸ್‍ಸಿ/ಎಸ್‍ಟಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರೆ ಸಮುದಾಯದ ಜನರು ಬಾಬಾ ಸಾಹೇಬ್ ಡಾ.ಬಿ.ಆರ್‍ಅಂಬೇಡ್ಕರ್ ಅನುಯಾಯಿಗಳು ಸಹ ಯಾತ್ರೆ ಕೈಗೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಯ್ಕೆಯಾದ ಯಾತ್ರಾರ್ಥಿಗಳು ಒಂದುವೇಳೆ ಸ್ವಂತ ವಾಹನದಲ್ಲಿ ಪ್ರಯಾಣ ಮಾಡಿದ್ದಲ್ಲಿ ಈ ಪ್ರಯಾಣ ಕೈಗೊಂಡಂತೆ ಧೃಢೀಕರಿಸಿ ಅಫಿಡವಿಟ್ ಸಲ್ಲಿಸಬೇಕು. ಪೆಟ್ರೋಲ್/ಡೀಸಲ್ ಬಿಲ್ಲುಗಳನ್ನು ಸಹ ಸಲ್ಲಿಸಬೇಕು ಹಾಗೂ ಅಲ್ಲಿಗೆ ಪ್ರಯಾಣ ಮಾಡಿದ್ದಕ್ಕೆ ಸೂಕ್ತ ದಾಖಲಾತಿಗಳನ್ನು ಸಲ್ಲಿಸುವುದು. ಡಾ.ಬಿ.ಆರ್‍ಅಂಬೇಡ್ಕರ್ ಅವರ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು. ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರದ ದೀಕ್ಷಾ ಭೂಮಿಗೆ ಪ್ರವಾಸ ಮಾಡಿದವರು 2ನೇ ಬಾರಿ ಈ ಸೌಲಭ್ಯಕ್ಕೆ ಅರ್ಹರಲ್ಲ. ಸರ್ಕಾರಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರಲ್ಲ.

ರಾಜ್ಯದಲ್ಲಿ ಆಯಾಯ ಜಿಲ್ಲೆಗಳಿಂದಲೇ ನಾಗಪುರಕ್ಕೆ ಹೋಗಿ ಬರಲು ತಗಲುವ ಪ್ರಯಾಣದ ವೆಚ್ಚ ಮಾತ್ರ ಸರ್ಕಾರದಿಂದ ಭರಿಸಲಾಗುವುದು, ವಸತಿ ಮತ್ತು ಭೋಜನಾ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸತಕ್ಕದ್ದು. ಯಾತ್ರಾರ್ಥಿಗಳು ತಮ್ಮ ಹೆಸರಿನಲ್ಲಿರುವ ಉಳಿತಾಯ ಖಾತೆಯ ಸಂಖ್ಯೆ ಬ್ಯಾಂಕಿನ ಹೆಸರು, ವಿಳಾಸ ಮತ್ತು ಐಎಫ್‍ಎಸ್‍ಸಿ ಕೋಡ್‍ನ್ನು ಕಡ್ಡಾಯವಾಗಿ ಆನ್‍ಲೈನ್‍ನಲ್ಲಿ ಭರ್ತಿ ಮಾಡತಕ್ಕದ್ದು.

ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ 08272-225531 ಹಾಗೂ 9480843037, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ 9480843155, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ 9480843156 ಹಾಗೂ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ 9480843157 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular